ವಿಧಾನಪರಿಷತ್ ಚುನಾವಣೆ : 11 ಸದಸ್ಯರು ಅವಿರೋಧವಾಗಿ ಆಯ್ಕೆ
ಬೆಂಗಳೂರು, ಜೂನ್ 04 : ವಿಧಾನಪರಿಷತ್ ಚುನಾವಣೆಯಲ್ಲಿ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 11ರಂದು ಸದಸ್ಯರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು.
ಸೋಮವಾರ ವಿಧಾನಪರಿಷತ್ ಚುನಾವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರು 11 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬಗ್ಗೆ ಅಧಿಕೃತವಾದ ಘೋಷಣೆ ಮಾಡಿದರು. ಒಟ್ಟು 11 ಸದಸ್ಯರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಕೆ.ಗೋವಿಂದರಾಜ್, ಸಿ.ಎಂ.ಇಬ್ರಾಹಿಂ, ಅರವಿಂದ ಕುಮಾರ್ ಎಸ್.ಅರಳಿ, ಕೆ.ಹರೀಶ್ ಕುಮಾರ್ ಸೇರಿ 4 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ರಘುನಾಥ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ ಅವರು ಅವಿರೋಧವಾಗಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಪಕ್ಷದಿಂದ ಬಿ.ಎಂ.ಫಾರೂಕ್ ಮತ್ತು ಎಸ್.ಎಸ್.ಧರ್ಮೇಗೌಡ ಅವರು ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೂನ್ 17ರಂದು ನಿವೃತ್ತಿಯಾಗುವ ಸದಸ್ಯರ ಸ್ಥಾನ ಭರ್ತಿ ಮಾಡಲು ಜೂನ್ 11ರಂದು ಚುನಾವಣೆ ನಿಗದಿಯಾಗಿತ್ತು. ಕರ್ನಾಟಕ ವಿಧಾನಸಭೆಯ ಸದಸ್ಯರು ಪರಿಷತ್ತಿಗೆ ಸದಸ್ಯರನ್ನು ಆಯ್ಕೆ ಮಾಡಬೇಕಿತ್ತು. ಆದರೆ, ಎಲ್ಲರೂ ಅವಿರೋಧವಾಗಿ ಆಯ್ಕೆ ಆಗಿದ್ದು ಚುನಾವಣೆ ನಡೆಯುವ ಅಗತ್ಯವಿಲ್ಲ.












Click it and Unblock the Notifications