ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಪರಿಷತ್ ಚುನಾವಣೆ : 11 ಸದಸ್ಯರು ಅವಿರೋಧವಾಗಿ ಆಯ್ಕೆ

By Gururaj
|
Google Oneindia Kannada News

ಬೆಂಗಳೂರು, ಜೂನ್ 04 : ವಿಧಾನಪರಿಷತ್ ಚುನಾವಣೆಯಲ್ಲಿ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 11ರಂದು ಸದಸ್ಯರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು.

ಸೋಮವಾರ ವಿಧಾನಪರಿಷತ್ ಚುನಾವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರು 11 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬಗ್ಗೆ ಅಧಿಕೃತವಾದ ಘೋಷಣೆ ಮಾಡಿದರು. ಒಟ್ಟು 11 ಸದಸ್ಯರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ತಿನ 11 ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆವಿಧಾನಪರಿಷತ್ತಿನ 11 ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆ

ಕಾಂಗ್ರೆಸ್ ಪಕ್ಷದಿಂದ ಕೆ.ಗೋವಿಂದರಾಜ್, ಸಿ.ಎಂ.ಇಬ್ರಾಹಿಂ, ಅರವಿಂದ ಕುಮಾರ್ ಎಸ್.ಅರಳಿ, ಕೆ.ಹರೀಶ್‌ ಕುಮಾರ್ ಸೇರಿ 4 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

11 elected unopposed to Legislative council

ಬಿಜೆಪಿಯಿಂದ ರಘುನಾಥ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ ಅವರು ಅವಿರೋಧವಾಗಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ, ಜೆಡಿಎಸ್‌ಗೆ ಸಭಾಪತಿ ಹುದ್ದೆ!ಕಾಂಗ್ರೆಸ್-ಜೆಡಿಎಸ್‌ ಮೈತ್ರಿ, ಜೆಡಿಎಸ್‌ಗೆ ಸಭಾಪತಿ ಹುದ್ದೆ!

ಜೆಡಿಎಸ್ ಪಕ್ಷದಿಂದ ಬಿ.ಎಂ.ಫಾರೂಕ್ ಮತ್ತು ಎಸ್.ಎಸ್.ಧರ್ಮೇಗೌಡ ಅವರು ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂನ್ 17ರಂದು ನಿವೃತ್ತಿಯಾಗುವ ಸದಸ್ಯರ ಸ್ಥಾನ ಭರ್ತಿ ಮಾಡಲು ಜೂನ್ 11ರಂದು ಚುನಾವಣೆ ನಿಗದಿಯಾಗಿತ್ತು. ಕರ್ನಾಟಕ ವಿಧಾನಸಭೆಯ ಸದಸ್ಯರು ಪರಿಷತ್ತಿಗೆ ಸದಸ್ಯರನ್ನು ಆಯ್ಕೆ ಮಾಡಬೇಕಿತ್ತು. ಆದರೆ, ಎಲ್ಲರೂ ಅವಿರೋಧವಾಗಿ ಆಯ್ಕೆ ಆಗಿದ್ದು ಚುನಾವಣೆ ನಡೆಯುವ ಅಗತ್ಯವಿಲ್ಲ.

English summary
11 candidates elected unopposed to Legislative council. To elect 11 candidates from Karnataka assembly election scheduled on June 11, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X