Breaking: ಕರ್ನಾಟಕ ಸರ್ಕಾರದಿಂದ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿಯಾಗಿದ್ದು, ಸೋಮವಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ.
1. ಬೆಂಗಳೂರಿನ ಹೆಚ್ಚುವರಿ ಪ್ರಧಾನ ಪೊಲೀಸ್ ಮಹಾನಿರ್ದೇಶಕಿ (ಎಡಿಜಿಪಿ) ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಲಿನಿ ಕೃಷ್ಣಮೂರ್ತಿ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪ್ರಧಾನ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.
2. ಬೆಂಗಳೂರಿನಲ್ಲಿ ಭಷ್ಟಾಚಾರ ನಿಗ್ರಹ ದಳದ ಎಡಿಜಿಪಿ ಆಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ)ನ ಎಡಿಜಿಪಿ ಆಗಿ ವರ್ಗವಾಗಿದ್ದಾರೆ.

3. ಕೆಎಸ್‌ಆರ್‌ಪಿಯ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿದ್ದ ರವಿ.ಎಸ್ ಅವರನ್ನು ಸರ್ಕಾರಿ ಕಾರ್ಯದರ್ಶಿ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಗೆ ವರ್ಗಾಯಿಸಲಾಗಿದೆ.
4. ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಅಜಯ್ ಹಿಲೋರಿ ಅವರನ್ನು ಡಿಸಿಆರ್‌ಇ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
5. ಬೆಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಯತೀಶ್ ಚಂದ್ರ ಜಿ. ಎಚ್. ಅವರನ್ನು ಕ್ರೈಂ-2 ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಲಾಗಿದೆ.
6. ಕಲಬುರಗಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಅಮರನಾಥ ರೆಡ್ಡಿ ವೈ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಲಬುರಗಿಯ ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

7. ಬಳ್ಳಾರಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಶ್ರೀಹರಿ ಬಾಬು ಬಿ.ಎಲ್. ಅವರು ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗವಾಗಿದ್ದಾರೆ.
8. ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾ ರಾಣಿ ವಿ.ಜೆ. ಅವರು ಬೆಂಗಳೂರಿನ ಬೆಂಗಳೂರು ಮಹಾನಗರ ಕಾರ್ಯಪಡೆ (BMTF)ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸ್ಥಳಾಂತರಗೊಂಡಿದ್ದಾರೆ.
9. ಮೈಸೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಜೀತ್ ವಿ.ಜೆ. ಅವರನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ನಿಯೋಜಿಸಲಾಗಿದೆ.
10 ವಿಜಯಪುರ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಾಮ್.ಎಲ್.ಅರಸಿದ್ಧಿ ಅವರು ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡರು.
11. ಬೆಳಗಾವಿಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಾಬಾಸಾಬ್ ನ್ಯಾಮಗೌಡ ಅವರನ್ನು ಬೆಳಗಾವಿಯ ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ ಎಂದು ಆದೇಶವು ತಿಳಿಸಿದೆ.












Click it and Unblock the Notifications