ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗುಲು; 11ಕ್ಕೂ ಹೆಚ್ಚು ಜನರು ಅಸ್ವಸ್ಥ!
ದಕ್ಷಿಣಕನ್ನಡ, ಅಕ್ಟೋಬರ್ 21:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗುಲು ಉಂಟಾಗಿ 11 ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದು, ಈ ವೇಳೆ 11ಕ್ಕೂ ಹೆಚ್ಚು ಜನರು ನೂಕುನಗ್ಗಲು ನಿಂದಾಗಿ ಅಸ್ವಸ್ಥಗೊಂಡಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಶಾಸಕ ಅಶೋಕ ರೈ ನೇತ್ರತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗುಲು ಉಂಟಾಗಿದ್ದು, 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಬಹಳಷ್ಟು ಜನರು ಅಸ್ವಸ್ಥರಾಗಿದ್ದಾರೆ. ಕುಡಿಯಲು ನೀರು ಸಿಗದೆ ಜನರು ಪರದಾಟ ನಡೆಸಿದ್ದಾರೆ. ಅಲ್ಲದೇ ಸಣ್ಣ ಮಕ್ಕಳನ್ನು ಜನರು ಕರೆದುಕೊಂಡು ಈ ಒಂದು ಕಾರ್ಯಕ್ರಮಕ್ಕೆ ಮಹಿಳೆಯರು ಬಂದಿದ್ದರು.

ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ನೂಕು ನುಗ್ಗಲು ಉಂಟಾಗಿ ಆಮ್ಲಜನಕದ ಕೊರತೆ ಉಂಟಾಗಿದ್ದು, ಸುಮಾರು ಮಹಿಳೆಯರು ಮಕ್ಕಳು ಸೇರಿದಂತೆ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ವೇಳೆ ತಕ್ಷಣ ಅವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ : ಸಿದ್ದರಾಮಯ್ಯ
ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.
2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು. ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.












Click it and Unblock the Notifications