Get Updates
Get notified of breaking news, exclusive insights, and must-see stories!

ಮೋದಿ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದ 11 ನಗರ?

ಬೆಂಗಳೂರು, ಡಿ.26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಿಂದ 11 ನಗರಗಳನ್ನು ಕರ್ನಾಟಕ ಸರ್ಕಾರ ಆಯ್ಕೆ ಮಾಡಿ ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ರಾಮನಗರ, ತುಮಕೂರು, ದೇವನಹಳ್ಳಿ, ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಉಡುಪಿ, ಹೊಸಪೇಟೆ ಮತ್ತು ವಿಜಯಪುರಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.[ನೂರು ಸ್ಮಾರ್ಟ್ ಸಿಟಿಗಳ ನಿರ್ಮಾಣ ನಾಯ್ಡು ಗುರಿ]

ಆಯ್ಕೆ ಮಾನದಂಡವೇನು?: ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ, ಸ್ಮಾರ್ಟ್ ಸಿಟಿಗೆ ಯಾವುದೇ ನಗರಗಳನ್ನು ಆಯ್ಕೆ ಮಾಡಬೇಕಾದರೆ ಒಂದರಿಂದ ನಾಲ್ಕು ಮಿಲಿಯನ್ ಜನಸಂಖ್ಯೆಯನ್ನು ಹೊಂದಿರಲೇಬೇಕು ಎಂಬ ನಿಯಮವಿದೆ. ಹೀಗಾಗಿ 2011ರ ಜನಗಣತಿ ಪ್ರಕಾರ, ಬೆಂಗಳೂರಿನ ಜನಸಂಖ್ಯೆ 96 ಲಕ್ಷ ಮೀರಿರುವುದರಿದ ಈ ನಗರವನ್ನು ಆಯ್ಕೆ ಮಾಡಲಾಗಿಲ್ಲ.

11 smart cities, 3 heritage towns proposed by Karnataka Government

ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾರ್ಗಸೂಚಿಗಳನ್ನು ಹೊರಡಿಸಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯಾ ರಾಜ್ಯಗಳು ನಗರಗಳನ್ನು ಆಯ್ಕೆ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದರು. ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕ ನಗರಗಳಿಗೆ ರಾಜ್ಯ ಸರ್ಕಾರ ಮೂಲ ಸೌಕರ್ಯ ಒದಗಿಸಬೇಕಾಗುತ್ತದೆ.

ಹೆರಿಟೇಜ್ ಸಿಟಿ: ರಾಮನಗರ, ತುಮಕೂರು ಮತ್ತು ದೇವನಹಳ್ಳಿ ಈ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಉಡುಪಿ, ಹೊಸಪೇಟೆ ಹಾಗೂ ವಿಜಯಪುರವನ್ನು ಪಾರಂಪರಿಕ ನಗರಗಳೆಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. [3 ಕೋಟಿ ಜನರಿಗೆ ಸೂರು ಒದಗಿಸಲು ಯೋಜನೆ]

ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿಗೆ ದೇಶಾದ್ಯಂತ ರಾಜಧಾನಿ ಹೊರತುಪಡಿಸಿ ಎರಡನೇ ಹಂತದ ಎರಡು ಮತ್ತು ಮೂರನೇ ಹಂತದ ನಗರಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಂದಾಜು ಖರ್ಚು ವೆಚ್ಚ?: 100 ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಸುಮಾರು 10 ವರ್ಷ ಕಾಲಾವಧಿ ಬೇಕಾಗುತ್ತದೆ. ಸುಮಾರು 45 ಲಕ್ಷ ಕೋಟಿ ರು ವ್ಯಯಿಸಬೇಕಾಗುತ್ತದೆ. ಸರ್ಕಾರಿ ಮತ್ತು ಸಾರ್ವಜನಿಕ ಸಹಭಾಗಿತ್ವ(PPP ಮಾದರಿ)ದಲ್ಲಿ ಯೋಜನೆ ಸಾಕಾರಗೊಳ್ಳಲಿದೆ.

ಸಿಂಗಪುರ ಸೇರಿದಂತೆ ಅನೇಕ ಅಭಿವೃದ್ಧಿ ಶೀಲ ದೇಶಗಳು ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮುಂದಾಗಿವೆ. ಆಂಧ್ರಪ್ರದೇಶದ ಹೊಸ ರಾಜಧಾನಿ ನಿರ್ಮಾಣಕ್ಕೆ ಸಿಂಗಪುರದ ತಾಂತ್ರಿಕ ನೆರವು ಸಿಕ್ಕಿರುವುದನ್ನು ಇಲ್ಲಿ ಸ್ಮರಿಸಬಹುದು ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+