ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆಗೆ 11 ಸಾವಿರ ಕೆಎಸ್‌ಆರ್‌ಟಿಸಿ ಬಸ್ ನಿಯೋಜನೆ

|
Google Oneindia Kannada News

ಬೆಂಗಳೂರು, ಮಾರ್ಚ್ 22: ಲೋಕಸಭಾ ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 11 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ ಬಳಕೆ ಮಾಡಲಾಗುತ್ತದೆ ಎಂದು ನಿಗಮ ತಿಳಿಸಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಹಾಗಾಗಿ ಏ.16,17ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಕೆಎಸ್‌ಆರ್‌ಟಿಸಿಯ 3ರಿಂದ 4 ಸಾವಿರ ಬಸ್‌ಗಳು ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಳ್ಳಲಿವೆ. ಆದ್ದರಿಂದ ಏ.17 ಮತ್ತು 19ರಂದು ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ದೂರದ ಊರಿಗೆ ಪ್ರಯಾಣಿಸುವ ಜನರಿಗೆ ಬಸ್ ವ್ಯತ್ಯಯ ಉಂಟಾಗಲಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಏ.18ರಂದು ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಮೈಸೂರು-ಕೊಡಗು, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಬೆಂಗಳೂರು ಸುತ್ತಲಿನ ಜಿಲ್ಲೆಗೆ ತೆರಳುವವರಿಗೆ ಹೆಚ್ಚಿನ ಸಮಸ್ಯೆ ಆಗದಿದ್ದರೂ ಕರಾವಳಿ ಹಾಗೂ ಚಿತ್ರದುರ್ಗ ಕಡೆಗೆ ಪ್ರಯಾಣಿಸುವ ಜನರಿಗೆ ತೊಂದರೆಯಾಗಬಹುದು.

11 thousand ksrtc buses will be used for election duties

ಏ.18ರಂದು ಇತರೆ ನಿಗಮಗಳಿಂದ ಕೆಎಸ್‌ಆರ್‌ಟಿಸಿ ಕಾರ್ಯಾಚರಣೆ ನಡೆಸುವ ಜಿಲ್ಲೆಗೆ ಹೆಚ್ಚಿನ ಬಸ್‌ ಕಾರ್ಯಾಚರಣೆ ಮಾಡಲಿವೆ. ಏ.23ರಂದು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿಯ ಹೆಚ್ಚಿನ ಬಸ್ ಬಳಕೆ ಆಗಲಿವೆ. ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆ ಎಂಡಿ ಶಿವಯೋಇ ಕಳಸದ ತಿಳಿಸಿದ್ದಾರೆ.

English summary
Election commission is using11 thousand KSRTC buses so during that time passengers will face difficulties in traveling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X