ಮೇ 20ರಂದು ನೀಟ್ ಮರು ಪರೀಕ್ಷೆ : 110 ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು, ಮೇ 12 : ಕರ್ನಾಟಕದಲ್ಲಿ ನೀಟ್ ಪರೀಕ್ಷೆಯಿಂದ ಹಲವು ವಿದ್ಯಾರ್ಥಿಗಳು ವಂಚಿತರಾಗಿದ್ದರು. ಅವರಿಗೆ ಮೊತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಇದುವರೆಗೂ 110 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಮೇ 20ರಂದು ಮತ್ತೊಮ್ಮೆ ನೀಟ್ ಪರೀಕ್ಷೆ ನಡೆಯಲಿದೆ. ಮೇ 5 ರಂದು ಸುಮಾರು 500 ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದುವರೆಗೆ 110 ವಿದ್ಯಾರ್ಥಿಗಳು ಮಾತ್ರ ನೋಂದಣಿ ಮಾಡಿಸಿದ್ದಾರೆ.

ನೀಟ್ ಪರೀಕ್ಷೆ ಮೇ 5ರಂದು ನಡೆದಿತ್ತು. ಆದರೆ, ಹಂಪಿ ಎಕ್ಸ್‌ಪ್ರೆಸ್ ರೈಲು ತಡವಾಗಿ ಬಂದ ಕಾರಣ ಹಲವಾರು ವಿದ್ಯಾರ್ಥಿಗಳು ಪರೀಕ್ಷೆಗೆ ಸರಿಯಾದ ಸಮಯಕ್ಕೆ ಬರಲು ಆಗಿರಲಿಲ್ಲ. ಕರ್ನಾಟಕ ಸರ್ಕಾರದ ಮನವಿಯಂತೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

110 students registers for NEET re exam on May 20

ಮರು ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಮೇ 5ರ ರೈಲ್ವೆ ಟಿಕೆಟ್, ಪ್ರವೇಶ ಪತ್ರವನ್ನು ಜೊತೆಗೆ ಲಗತ್ತಿಸಬೇಕು. ಸುಮಾರು 30 ವಿದ್ಯಾರ್ಥಿಗಳು ಯಾವುದೇ ಕಾರಣ ನೀಡದೆ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ಸರಿಯಾದ ಕಾರಣ ನೀಡದೆ, ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಕೇವಲ ಸೈಬರ್ ಸೆಂಟರ್‌ನಿಂದ ಮರು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿಗಳನ್ನು ವಜಾಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೇ 5ರಂದು ಸುಮಾರು 500 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇದುವರೆಗೂ 110 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಮೇ 20ರಂದು ಮರು ಪರೀಕ್ಷೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+