ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 20ರಂದು ನೀಟ್ ಮರು ಪರೀಕ್ಷೆ : 110 ವಿದ್ಯಾರ್ಥಿಗಳ ನೋಂದಣಿ

|
Google Oneindia Kannada News

ಬೆಂಗಳೂರು, ಮೇ 12 : ಕರ್ನಾಟಕದಲ್ಲಿ ನೀಟ್ ಪರೀಕ್ಷೆಯಿಂದ ಹಲವು ವಿದ್ಯಾರ್ಥಿಗಳು ವಂಚಿತರಾಗಿದ್ದರು. ಅವರಿಗೆ ಮೊತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಇದುವರೆಗೂ 110 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಮೇ 20ರಂದು ಮತ್ತೊಮ್ಮೆ ನೀಟ್ ಪರೀಕ್ಷೆ ನಡೆಯಲಿದೆ. ಮೇ 5 ರಂದು ಸುಮಾರು 500 ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದುವರೆಗೆ 110 ವಿದ್ಯಾರ್ಥಿಗಳು ಮಾತ್ರ ನೋಂದಣಿ ಮಾಡಿಸಿದ್ದಾರೆ.

ನೀಟ್ ಪರೀಕ್ಷೆ ತಪ್ಪಿಸಿಕೊಂಡಿದ್ದವರಿಗೆ ಮೇ 20ಕ್ಕೆ ಪುನರ್‌ ಪರೀಕ್ಷೆ ನೀಟ್ ಪರೀಕ್ಷೆ ತಪ್ಪಿಸಿಕೊಂಡಿದ್ದವರಿಗೆ ಮೇ 20ಕ್ಕೆ ಪುನರ್‌ ಪರೀಕ್ಷೆ

ನೀಟ್ ಪರೀಕ್ಷೆ ಮೇ 5ರಂದು ನಡೆದಿತ್ತು. ಆದರೆ, ಹಂಪಿ ಎಕ್ಸ್‌ಪ್ರೆಸ್ ರೈಲು ತಡವಾಗಿ ಬಂದ ಕಾರಣ ಹಲವಾರು ವಿದ್ಯಾರ್ಥಿಗಳು ಪರೀಕ್ಷೆಗೆ ಸರಿಯಾದ ಸಮಯಕ್ಕೆ ಬರಲು ಆಗಿರಲಿಲ್ಲ. ಕರ್ನಾಟಕ ಸರ್ಕಾರದ ಮನವಿಯಂತೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

110 students registers for NEET re exam on May 20

ಮರು ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಮೇ 5ರ ರೈಲ್ವೆ ಟಿಕೆಟ್, ಪ್ರವೇಶ ಪತ್ರವನ್ನು ಜೊತೆಗೆ ಲಗತ್ತಿಸಬೇಕು. ಸುಮಾರು 30 ವಿದ್ಯಾರ್ಥಿಗಳು ಯಾವುದೇ ಕಾರಣ ನೀಡದೆ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.

ನೀಟ್ ವಂಚಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆ ಬರೆಯಲು ಮತ್ತೆ ಅವಕಾಶನೀಟ್ ವಂಚಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆ ಬರೆಯಲು ಮತ್ತೆ ಅವಕಾಶ

ಸರಿಯಾದ ಕಾರಣ ನೀಡದೆ, ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಕೇವಲ ಸೈಬರ್ ಸೆಂಟರ್‌ನಿಂದ ಮರು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿಗಳನ್ನು ವಜಾಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿ

ಮೇ 5ರಂದು ಸುಮಾರು 500 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇದುವರೆಗೂ 110 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಮೇ 20ರಂದು ಮರು ಪರೀಕ್ಷೆ ನಡೆಯಲಿದೆ.

English summary
110 students registered for the National Eligibility-Cum-Entrance Test (NEET) exam on May 20, 2019. On 5th May due to delay in train around 500 students miss the exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X