ಕರ್ನಾಟಕದಲ್ಲಿ ಒಂದೇ ದಿನ 1102 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಸೆಪ್ಟೆಂಬರ್ 8: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ 1,000 ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.64ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.54ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1102 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1458 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37458 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2958090ಕ್ಕೆ ಏರಿಕೆಯಾಗಿದೆ. ಒಟ್ಟು 2903547 ಸೋಂಕಿತರು ಗುಣಮುಖರಾಗಿದ್ದು. 17058 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1102 New Coronavirus Cases Reported in Karnataka Today, State Tally Rise to 2958090

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 338 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1240310ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16040ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7119 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 34,528 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,35,093 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,69,621 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 83,43,423 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,63,94,699 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,47,38,122 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1102 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 12 ಬೆಂಗಳೂರು 338, ಬೀದರ್ 0, ಚಾಮರಾಜನಗರ 8, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 51, ಚಿತ್ರದುರ್ಗ 6, ದಕ್ಷಿಣ ಕನ್ನಡ 200, ದಾವಣಗೆರೆ 7, ಧಾರವಾಡ 5, ಗದಗ 0, ಹಾಸನ 51, ಹಾವೇರಿ 2, ಕಲಬುರಗಿ 7, ಕೊಡಗು 33, ಕೋಲಾರ 12, ಕೊಪ್ಪಳ 4, ಮಂಡ್ಯ 4, ಮೈಸೂರು 64, ರಾಯಚೂರು 3, ರಾಮನಗರ 4, ಶಿವಮೊಗ್ಗ 55, ತುಮಕೂರು 31, ಉಡುಪಿ 133, ಉತ್ತರ ಕನ್ನಡ 40, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,788 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,18,947 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,37,988 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,72,342 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,47,22,347 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 76,66,458 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,47,48,640 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,18,70,419 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Recommended Video

      ಲಾಕ್ ಡೌನ್ ಆದಮೇಲೆ ಮತ್ತೆ ಡ್ರಗ್ ಪಾರ್ಟಿಗಳು ನಡೀತಿದೆ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+