ಅಲೆಗಳ ಆಟ: ಕರ್ನಾಟಕದಲ್ಲಿ ಮತ್ತೆ 1,000 ಗಡಿ ದಾಟಿದ ಕೊರೊನಾವೈರಸ್!

ಬೆಂಗಳೂರು, ಸೆಪ್ಟೆಂಬರ್ 15: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಗಣೇಶ ಚತುರ್ಥಿ ಆಚರಣೆ ಬೆನ್ನಲ್ಲೇ ಮತ್ತೊಮ್ಮೆ ಹೊಸ ಪ್ರಕರಣಗಳ ಸಂಖ್ಯೆ 1,000ದ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.65ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.71ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1116 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 970 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 8 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37537 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2964083ಕ್ಕೆ ಏರಿಕೆಯಾಗಿದೆ. ಒಟ್ಟು 2910626 ಸೋಂಕಿತರು ಗುಣಮುಖರಾಗಿದ್ದು. 15892 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ

ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 462 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1242332ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16065ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7328 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1218938 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 35,790 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,34,516 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,70,306 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 85,45,224 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,71,44,669 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,56,89,893 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ರಾಜ್ಯದಲ್ಲಿ ಒಟ್ಟು 1116 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 15 ಬೆಂಗಳೂರು 462, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 50, ಚಿತ್ರದುರ್ಗ 2, ದಕ್ಷಿಣ ಕನ್ನಡ 102, ದಾವಣಗೆರೆ 7, ಧಾರವಾಡ 4, ಗದಗ 0, ಹಾಸನ 81, ಹಾವೇರಿ 1, ಕಲಬುರಗಿ 1, ಕೊಡಗು 67, ಕೋಲಾರ 12, ಕೊಪ್ಪಳ 1, ಮಂಡ್ಯ 15, ಮೈಸೂರು 76, ರಾಯಚೂರು 0, ರಾಮನಗರ 0, ಶಿವಮೊಗ್ಗ 25, ತುಮಕೂರು 60, ಉಡುಪಿ 89, ಉತ್ತರ ಕನ್ನಡ 20, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಜಿಲ್ಲಾಧಿಕಾರಿ ದೇವಸ್ಥಾನ ಹೊಡೆದು ಹಾಕಿದ್ದು ತಪ್ಪು- ಮೈಸೂರು ದೇವಸ್ಥಾನ ತೆರವು ವಿಚಾರಕ್ಕೆ ಈಶ್ವರಪ್ಪ ಪ್ರತಿಕ್ರಿಯೆ | Oneindia Kannada
    ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ

    ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ

    ರಾಜ್ಯದಲ್ಲಿ ಈವರೆಗೂ 7,62,884 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,27,020 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,38,200 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,00,031 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,49,44,500 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 79,96,541 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,56,09,123 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,27,65,356 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+