• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ಸೋಂಕು: ಚಿಕ್ಕಮಗಳೂರು 112, ರಾಮನಗರ 67, ಚಿತ್ರದುರ್ಗದಲ್ಲಿ 71 ಕೇಸ್ ಪತ್ತೆ

By Lekhaka
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 12: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 112 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1818 ಕ್ಕೆ ಏರಿದೆ.

   ರಷ್ಯಾ ಅಧ್ಯಕ್ಷ ಪುಟಿನ್ ನಡೆ ಬಗ್ಗೆ ಪಾಶ್ಚಿಮಾತ್ಯ ದೇಶಗಳ ಮುನಿಸು | Oneindia Kannada

   ಚಿಕ್ಕಮಗಳೂರು 49, ಕಡೂರು 44, ತರೀಕೆರೆ 16, ಮೂಡಿಗೆರೆ 2, ಕೊಪ್ಪದಲ್ಲಿ 1 ಪ್ರಕರಣ ವರದಿಯಾಗಿದ್ದು, ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 37 ಮಂದಿ ಮೃತರಾಗಿದ್ದು, 810 ಸಕ್ರಿಯ ಪ್ರಕರಣಗಳಿವೆ.

   ಕರ್ನಾಟಕದಲ್ಲಿ ಇಂದು 7,833 ಹೊಸ ಕೋವಿಡ್ ಪ್ರಕರಣಕರ್ನಾಟಕದಲ್ಲಿ ಇಂದು 7,833 ಹೊಸ ಕೋವಿಡ್ ಪ್ರಕರಣ

   ರಾಮನಗರ ಜಿಲ್ಲೆಯಲ್ಲಿ ಇಂದು 67 ಕೋವಿಡ್-19 ಪ್ರಕರಣ ದೃಢ

   ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಒಟ್ಟು 67 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 1917 ಪ್ರಕರಣಗಳು ದಾಖಲಾಗಿವೆ.

   ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಚನ್ನಪಟ್ಟಣ-18, ಕನಕಪುರ-15, ಮಾಗಡಿ-5 ಮತ್ತು ರಾಮನಗರದಲ್ಲಿ-29 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಎಲ್ಲಾ ಸೋಂಕಿತರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 56, ಕನಕಪುರ ತಾಲ್ಲೂಕಿನಲ್ಲಿ 45, ಮಾಗಡಿ ತಾಲ್ಲೂಕಿನಲ್ಲಿ 23 ಹಾಗೂ ರಾಮನಗರ ತಾಲ್ಲೂಕಿನಲ್ಲಿ 121 ಜನ ಸೇರಿ ಒಟ್ಟಾರೆ 245 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.

   ಜಿಲ್ಲೆಯಲ್ಲಿ ಈವರೆಗೆ ಒಟ್ಟು 1209 ಜನರು ಗುಣಮುಖರಾಗಿದ್ದು, ಈ ಪೈಕಿ ಚನ್ನಪಟ್ಟಣ 256, ಕನಕಪುರ 249, ಮಾಗಡಿ 257 ಮತ್ತು ರಾಮನಗರದಲ್ಲಿ 447 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

   ಚಿತ್ರದುರ್ಗ ಜಿಲ್ಲೆಯಲ್ಲಿ 71 ಜನರಿಗೆ ಕೋವಿಡ್ ಸೋಂಕು ದೃಢ

   ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ ಮತ್ತೆ 71 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1284 ಕ್ಕೆ ಏರಿಕೆಯಾಗಿದೆ.

   ಜಿಲ್ಲೆಯ ಹಲವೆಡೆ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 86 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ-09, ಹೊಳಲ್ಕೆರೆ-18, ಹಿರಿಯೂರು-10, ಚಳ್ಳಕೆರೆ-11, ಹೊಸದುರ್ಗ-13, ಮೊಳಕಾಲ್ಮುರು ತಾಲ್ಲೂಕಿನಲ್ಲಿ 09 ಹಾಗೂ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ 01 ಸೇರಿದಂತೆ ಒಟ್ಟು 71 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

   ಇದುವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 18 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತರ ಪೈಕಿ ಈಗಾಗಲೇ 663 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 602 ಸಕ್ರಿಯ ಪ್ರಕರಣಗಳು ಇವೆ.

   English summary
   112 new coronavirus infections have been detected in Chikkamagaluru district today, increases Of total number of coronaviruses in the district to 1818.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X