ಶಾಕಿಂಗ್ ಸುದ್ದಿ: ಯುಗಾದಿ ನಡುವೆ ಕನ್ನಡಿಗರಿಗೆ ಕೊರೊನಾ ಕಹಿ!

ಬೆಂಗಳೂರು, ಏಪ್ರಿಲ್ 14: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಪ್ರತಿನಿತ್ಯ ಹೊಸ ದಾಖಲೆಗಳನ್ನು ಬರೆಯುತ್ತಿದೆ. 2021ರ ವರ್ಷದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕರ್ನಾಟಕದ ಜನರಿಗೆ ಕೊವಿಡ್-19 ಸೋಂಕಿನ ಅಂಕಿ-ಅಂಶಗಳು ಆತಂಕ ಸೃಷ್ಟಿಸಿದೆ. ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗ ಮತ್ತು ಲಸಿಕೆ ವಿತರಣೆ ನಡುವೆ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 11265 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1094912ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೇವು-ಬೆಲ್ಲ ಸವಿದ ಜನರಿಗೆ ಕೊರೊನಾ ಶಾಕ್

ಬೇವು-ಬೆಲ್ಲ ಸವಿದ ಜನರಿಗೆ ಕೊರೊನಾ ಶಾಕ್

ಯುಗಾದಿ ಹಬ್ಬದ ಸಂಭ್ರಮದ ನಡುವೆ ರಾಜ್ಯದಲ್ಲಿ 11265 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಒಂದೇ ದಿನ 38 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 13046ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 4364 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 996367 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 85480 ಸಕ್ರಿಯ ಪ್ರಕರಣಗಳಿವೆ.

ರಾಜ್ಯ ರಾಜಧಾನಿಯಲ್ಲಿ ಮುಂದುವರಿದೆ ಕೊರೊನಾ ಆರ್ಭಟ

ರಾಜ್ಯ ರಾಜಧಾನಿಯಲ್ಲಿ ಮುಂದುವರಿದೆ ಕೊರೊನಾ ಆರ್ಭಟ

ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಸಿಲಿಕಾನ್ ಸಿಟಿಯಲ್ಲೇ 8155 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 23 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4933ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯೊಂದರಲ್ಲೇ 63167 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ರಾಜ್ಯದಲ್ಲಿ ಒಟ್ಟು 11265 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 68, ಬಳ್ಳಾರಿ 159, ಬೆಳಗಾವಿ 107, ಬೆಂಗಳೂರು ಗ್ರಾಮಾಂತರ 48, ಬೆಂಗಳೂರು 8155, ಬೀದರ್ 290, ಚಾಮರಾಜನಗರ 72, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 42, ಚಿತ್ರದುರ್ಗ 17, ದಕ್ಷಿಣ ಕನ್ನಡ 140, ದಾವಣಗೆರೆ 34, ಧಾರವಾಡ 127, ಗದಗ 25, ಹಾಸನ 132, ಹಾವೇರಿ 44, ಕಲಬುರಗಿ 376, ಕೊಡಗು 23, ಕೋಲಾರ 116, ಕೊಪ್ಪಳ 37, ಮಂಡ್ಯ 85, ಮೈಸೂರು 356, ರಾಯಚೂರು 65, ರಾಮನಗರ 35, ಶಿವಮೊಗ್ಗ 92, ತುಮಕೂರು 245, ಉಡುಪಿ 110, ಉತ್ತರ ಕನ್ನಡ 41, ವಿಜಯಪುರ 122, ಯಾದಗಿರಿ 58 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಕೊರೋನಾ ಕಂಟ್ರೋಲ್ ಗೆ ನೈಟ್ ಕರ್ಫ್ಯೂ ಹಾಗೂ ಟಫ್ ರೂಲ್ಸ್ ಜಾರಿ | Oneindia Kannada
    ರಾಜ್ಯದಲ್ಲಿ ಒಟ್ಟು 61.26 ಲಕ್ಷ ಜನರಿಗೆ ಕೊರೊನಾ ಲಸಿಕೆ

    ರಾಜ್ಯದಲ್ಲಿ ಒಟ್ಟು 61.26 ಲಕ್ಷ ಜನರಿಗೆ ಕೊರೊನಾ ಲಸಿಕೆ

    ಕರ್ನಾಟಕದಲ್ಲಿ ಈವರೆಗೂ 6126622 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ 573673 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 357651 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 252543 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 103523 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 1892858 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 32917 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 2821618 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 91839 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+