ಕರ್ನಾಟಕದಲ್ಲಿ 1141 ಮಂದಿ ಕೊರೊನಾ ಸೋಂಕಿತರು ಪತ್ತೆ, 14 ಮಂದಿ ಸಾವು
ಬೆಂಗಳೂರು, ಡಿಸೆಂಬರ್ 22: ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಇಂದು ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಇಂದು 585 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,83,816ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 8 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1,136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,85,341ಕ್ಕೆ ಏರಿಕೆಯಾಗಿದೆ.
1141 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,11,382ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,029 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬಾಗಲಕೋಟೆ 1, ಬಳ್ಳಾರಿ 41, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 585, ಬೀದರ್ 9, ಚಾಮರಾಜನಗರ 3, ಚಿಕ್ಕಬಳ್ಳಾಪುರ 58, ಚಿಕ್ಕಮಗಳೂರು 8, ಚಿತ್ರದುರ್ಗ 10, ದಕ್ಷಿಣ ಕನ್ನಡ 46, ದಾವಣಗೆರೆ 20, ಧಾರವಾಡ 24, ಗದಗ 1, ಹಾಸನ 27, ಹಾವೇರಿ 4, ಕಲಬುರಗಿ 36, ಕೊಡಗು 18, ಕೋಲಾರ 19, ಕೊಪ್ಪಳ 08, ಮಂಡ್ಯ 10, ಮೈಸೂರು 67, ರಾಯಚೂರು 9, ರಾಮನಗರ 7, ಶಿವಮೊಗ್ಗ 16, ತುಮಕೂರು 47, ಉಡುಪಿ 15, ಉತ್ತರ ಕನ್ನಡ 6, ವಿಜಯಪುರ 8, ಯಾದಗಿರಿಯಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ.











Click it and Unblock the Notifications