ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿನ ಭೀತಿಯಿಲ್ಲ!

ಬೆಂಗಳೂರು, ಆಗಸ್ಟ್ 23: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.08ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.86ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 10 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37155ಕ್ಕೆ ಏರಿಕೆಯಾಗಿದೆ. ಇನ್ನೊಂದು ದಿಕ್ಕಿನಲ್ಲಿ ಒಂದೇ ದಿನ 1151 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1442 ಸೋಂಕಿತರು ಗುಣಮುಖರಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2939767ಕ್ಕೆ ಏರಿಕೆಯಾಗಿದೆ. ಒಟ್ಟು 2882331 ಸೋಂಕಿತರು ಗುಣಮುಖರಾಗಿದ್ದು. 20255 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 270 ಜನರಿಗೆ ಕೊವಿಡ್-19

ರಾಜ್ಯ ರಾಜಧಾನಿಯಲ್ಲಿ 270 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 270 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235306ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಈವರೆಗೂ 15959 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7669 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 14,382 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 91,982 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 106,364 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 78,24,343 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,42,47,045 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,20,71,388 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1151 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 10 ಬೆಂಗಳೂರು 270, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 42, ಚಿತ್ರದುರ್ಗ 18, ದಕ್ಷಿಣ ಕನ್ನಡ 236, ದಾವಣಗೆರೆ 1, ಧಾರವಾಡ 0, ಗದಗ 3, ಹಾಸನ 115, ಹಾವೇರಿ 1, ಕಲಬುರಗಿ 17, ಕೊಡಗು 54, ಕೋಲಾರ 7, ಕೊಪ್ಪಳ 5, ಮಂಡ್ಯ 32, ಮೈಸೂರು 76, ರಾಯಚೂರು 0, ರಾಮನಗರ 1, ಶಿವಮೊಗ್ಗ 8, ತುಮಕೂರು 44, ಉಡುಪಿ 137, ಉತ್ತರ ಕನ್ನಡ 42, ವಿಜಯಪುರ 2, ಯಾದಗಿರಿ 5 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,452 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,86,315 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,35,614 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,64,284 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,37,26,423 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 63,39,715 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,85,45,778 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 87,80,104 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Recommended Video

      ಕನ್ನಡಿಗರು ಅಫ್ಘಾನಿಸ್ತಾನದಿಂದ ಹಿಂದಿರುಗಿದ ನಂತರ ಕೆಲವು ಅಂಶಗಳನ್ನು ಬಿಚ್ಚಿಟ್ಟಿದ್ದಾರೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+