ಕರ್ನಾಟಕದಲ್ಲಿ ಹೊಸದಾಗಿ 1152 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಡಿಸೆಂಬರ್ 19: ಕರ್ನಾಟಕದಲ್ಲಿ ಕೊರೊನಾ ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಇಂದು 1152 ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಸೋಂಕಿತರ ಸಂಖ್ಯೆ 9,08,275ಕ್ಕೆ ಏರಿಕೆಯಾಗಿದೆ.ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 15 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,004 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 586 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,82,209ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

corona

ರಾಜ್ಯದಲ್ಲಿ ಇಂದು 2,174 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,81,882ಕ್ಕೆ ಏರಿಕೆಯಾಗಿದೆ. ಇನ್ನು 14,370 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 223 ಮಂದಿ ಕೊರೊನಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ 12, ಬಳ್ಳಾರಿ 24, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 31, ಬೆಂಗಳೂರು ನಗರ 586, ಬೀದರ್ 08, ಚಾಮರಾಜನಗರ 19, ಚಿಕ್ಕಬಳ್ಳಾಪುರ 20, ಚಿಕ್ಕಮಗಳೂರು 14, ಚಿತ್ರದುರ್ಗ 16, ದಕ್ಷಿಣ ಕನ್ನಡ 34, ದಾವಣಗೆರೆ 12, ಧಾರವಾಡ 25, ಗದಗ 04, ಹಾಸನ 18, ಹಾವೇರಿ 04, ಕಲಬುರಗಿ 50, ಕೊಡಗು 17, ಕೋಲಾರ 09, ಕೊಪ್ಪಳ 06, ಮಂಡ್ಯ 30, ಮೈಸೂರು 66, ರಾಯಚೂರು 14., ರಾಮನಗರ 09, ಶಿವಮೊಗ್ಗ 30, ತುಮಕೂರು25, ಉಡುಪಿ 08, ಉತ್ತರ ಕನ್ನಡ 17, ವಿಜಯಪುರ 10, ಯಾದಗಿರಿಯಲ್ಲಿ5 ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+