3ನೇ ಅಲೆ ಭೀತಿ ನಡುವೆ ಕರ್ನಾಟಕದಲ್ಲಿ ಕೊರೊನಾವೈರಸ್ ಸಂಖ್ಯೆ ಇಳಿಮುಖ
ಬೆಂಗಳೂರು, ಆಗಸ್ಟ್ 9: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ನಾಲ್ಕನೇ ಪ್ರಕರಣ ವರದಿ ಆಗಿರುವುದರ ಮಧ್ಯೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.89ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.02ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1186 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1776 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36817 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ. ಒಟ್ಟು 2859552 ಸೋಂಕಿತರು ಗುಣಮುಖರಾಗಿದ್ದು. 23316 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 296 ಜನರಿಗೆ ಕೊವಿಡ್-19
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 296 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230782ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15915ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8378 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17910 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,14,282 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,32,192 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 74,00,716 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,25,77,799 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,99,78,515 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 1186 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 19 ಬೆಂಗಳೂರು 296, ಬೀದರ್ 1, ಚಾಮರಾಜನಗರ 31, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 24, ಚಿತ್ರದುರ್ಗ 15, ದಕ್ಷಿಣ ಕನ್ನಡ 273, ದಾವಣಗೆರೆ 4, ಧಾರವಾಡ 1, ಗದಗ 3, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 83, ಕೋಲಾರ 28, ಕೊಪ್ಪಳ 5, ಮಂಡ್ಯ 29, ಮೈಸೂರು 82, ರಾಯಚೂರು 0, ರಾಮನಗರ 2, ಶಿವಮೊಗ್ಗ 34, ತುಮಕೂರು 40, ಉಡುಪಿ 81, ಉತ್ತರ ಕನ್ನಡ 30, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,61,616 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,55,187 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,31,828 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,79,230 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,24,61,055 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 56,13,110 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,57,18,122 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 73,88,422 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications