ಕೊವಿಡ್-19 ಇಳಿಮುಖ: ಕರ್ನಾಟಕದಲ್ಲಿ ಒಂದೇ ದಿನ 1189 ಮಂದಿಗೆ ಸೋಂಕು
ಬೆಂಗಳೂರು, ಆಗಸ್ಟ್ 22: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.94ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.85ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1189 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1408 ಸೋಂಕಿತರು ಗುಣಮುಖರಾಗಿದ್ದು, 22 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37145ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾವೈರಸ್ ಲಸಿಕೆ
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2938616ಕ್ಕೆ ಏರಿಕೆಯಾಗಿದೆ. ಒಟ್ಟು 2880889 ಸೋಂಕಿತರು ಗುಣಮುಖರಾಗಿದ್ದು. 20556 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯ ರಾಜಧಾನಿಯಲ್ಲಿ 267 ಜನರಿಗೆ ಕೊವಿಡ್-19:
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 267 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235036ಕ್ಕೆ ಏರಿಕೆಯಾಗಿದೆ. ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15959ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7762 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 32,316 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 92,842 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,25,158 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 78,09,961 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,41,55,063 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,19,65,024 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?:
ರಾಜ್ಯದಲ್ಲಿ ಒಟ್ಟು 1189 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 12 ಬೆಂಗಳೂರು 267, ಬೀದರ್ 3, ಚಾಮರಾಜನಗರ 8, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 50, ಚಿತ್ರದುರ್ಗ 10, ದಕ್ಷಿಣ ಕನ್ನಡ 286, ದಾವಣಗೆರೆ 19, ಧಾರವಾಡ 4, ಗದಗ 2, ಹಾಸನ 75, ಹಾವೇರಿ 1, ಕಲಬುರಗಿ 0, ಕೊಡಗು 55, ಕೋಲಾರ 8, ಕೊಪ್ಪಳ 1, ಮಂಡ್ಯ 19, ಮೈಸೂರು 79, ರಾಯಚೂರು 1, ರಾಮನಗರ 5, ಶಿವಮೊಗ್ಗ 24, ತುಮಕೂರು 39, ಉಡುಪಿ 132, ಉತ್ತರ ಕನ್ನಡ 40, ವಿಜಯಪುರ 2, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?:
ರಾಜ್ಯದಲ್ಲಿ ಈವರೆಗೂ 7,62,432 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,83,494 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,35,476 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,55,368 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,35,31,256 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 62,70,529 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,82,88,036 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 86,32,478 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications