ಬೆಂಗಳೂರಿಗರಿಗೆ ನಿರಾಳ: ಕರ್ನಾಟಕದಲ್ಲಿ ಕೊರೊನಾವೈರಸ್ ಲೆಕ್ಕಾಚಾರ
ಬೆಂಗಳೂರು, ಜೂನ್ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ನಲುಗಿ ಹೋಗಿದ್ದ ಸಿಲಿಕಾನ್ ಸಿಟಿ ಜನರಿಗೆ ಸೋಮವಾರದ ಅಂಕಿ-ಅಂಶಗಳು ಕೊಂಚ ನೆಮ್ಮದಿ ನೀಡುತ್ತದೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 2,000ಕ್ಕೂ ಕಡಿಮೆ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಸಿಲಿಕಾನ್ ಸಿಟಿಯಲ್ಲಿ ಕಳೆದೊಂದು ದಿನದಲ್ಲಿ 1992 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 199 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 11,488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲ್ಲಿ ಒಂದು ದಿನದಲ್ಲಿ 11,958 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 340 ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 31,920ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 24,36,716 ಸೋಂಕಿತರು ಗುಣಮುಖರಾಗಿದ್ದು, 2,38,824 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ರಾಜ್ಯದಲ್ಲಿ ಒಟ್ಟು 11488 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 112, ಬಳ್ಳಾರಿ 267, ಬೆಳಗಾವಿ 355, ಬೆಂಗಳೂರು ಗ್ರಾಮಾಂತರ 292, ಬೆಂಗಳೂರು 1992, ಬೀದರ್ 13, ಚಾಮರಾಜನಗರ 209, ಚಿಕ್ಕಬಳ್ಳಾಪುರ 282, ಚಿಕ್ಕಮಗಳೂರು 365, ಚಿತ್ರದುರ್ಗ 294, ದಕ್ಷಿಣ ಕನ್ನಡ 408, ದಾವಣಗೆರೆ 380, ಧಾರವಾಡ 313, ಗದಗ 141, ಹಾಸನ 1108, ಹಾವೇರಿ 179, ಕಲಬುರಗಿ 67, ಕೊಡಗು 230, ಕೋಲಾರ 298, ಕೊಪ್ಪಳ 155, ಮಂಡ್ಯ 597, ಮೈಸೂರು 1213, ರಾಯಚೂರು 64, ರಾಮನಗರ 48, ಶಿವಮೊಗ್ಗ 1224, ತುಮಕೂರು 420, ಉಡುಪಿ 394, ಉತ್ತರ ಕನ್ನಡ 364, ವಿಜಯಪುರ 137, ಯಾದಗಿರಿ 37 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications