ಉಕ್ರೇನ್ ಬಿಕ್ಕಟ್ಟು; ಬೆಂಗಳೂರಿಗೆ ಬಂದ 12 ಕನ್ನಡಿಗರು

ಬೆಂಗಳೂರು, ಫೆಬ್ರವರಿ 27; ಉಕ್ರೇನ್‌ನಲ್ಲಿ ಸಿಲುಕಿದ್ದ 12 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ 18 ಜನರು ದೆಹಲಿಯಲ್ಲಿದ್ದು, ರಾಜ್ಯಕ್ಕೆ ಆಗಮಿಸಲಿದ್ದಾರೆ.

ಭಾನುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಸಚಿವ ಆರ್. ಅಶೋಕ ಮುಂಬೈ ಮೂಲಕ ರಾಜ್ಯಕ್ಕೆ ಆಗಮಿಸಿದ 12 ಜನರನ್ನು ಬರಮಾಡಿಕೊಂಡರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ದೆಹಲಿಯಿಂದ ಇನ್ನು 18 ಜನರು ಆಗಮಿಸಲಿದ್ದಾರೆ. ರಾಜ್ಯ ಕಂದಾಯ ಇಲಾಖೆಯಿಂದ ಕರ್ನಾಟಕ ಭವನದಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ" ಎಂದರು.

12 People From Ukraine Arrived To Bengaluru Airport

"ಉಕ್ರೇನ್‌ನಿಂದ ಆಗಮಿಸಿದವರು ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿಗೆ ಬರಲು ಅವರಿಗೆ ಟಿಕೆಟ್ ಬುಕ್ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆಯೂ ಮಾತುಕತೆ ನಡೆಸಿದ್ದೇನೆ" ಎಂದು ಆರ್‌. ಅಶೋಕ ಹೇಳಿದರು.

387 ಜನರಿದ್ದಾರೆ; ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ಬಳಿಕ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಜನರ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಉಕ್ರೇನ್‌ನಲ್ಲಿ ರಾಜ್ಯದ 387 ಜನರು ಸಿಲಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆಯ ಸಹಾಯವಾಣಿಗೆ ಬರುತ್ತಿರುವ ಕರೆಗಳ ಆಧಾರದ ಮೇಲೆ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಜನರಿಗೆ ಸಹಾಯ ಮಾಡಲಾಗುತ್ತಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರಿಗೆ ನೆರವು ನೀಡಲು ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಆರ್. ಮನೋಜ್‌ ರಂಜನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

ರಾಜ್ಯದ 207 ವಿದ್ಯಾರ್ಥಿಗಳು, 180 ವಿದ್ಯಾರ್ಥಿಗಳು ಸಿಲುಕಿದ್ದಾರೆ. ಇವರಲ್ಲಿ 87 ಜನರು ಗ್ರಾಮೀಣ ಪ್ರದೇಶದವರು. ಉಕ್ರೇನ್‌ನಿಂದ 250 ಭಾರತೀಯರಿದ್ದ ವಿಮಾನ ದೆಹಲಿಗೆ ಆಗಮಿಸಿದೆ. 240 ಜನರಿದ್ದ ಮತ್ತೊಂದು ವಿಮಾಣ ಹೊರಟಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಆರ್. ಮನೋಜ್‌ ರಂಜನ್ ಮಾತನಾಡಿ, "ಮುಂಬೈಗೆ ಆಗಮಿಸಿದ್ದ 12 ಜನರು ಬೆಂಗಳೂರಿಗೆ ಸದ್ಯ ಆಗಮಿಸಿದ್ದಾರೆ. ಮತ್ತೊಂದು ತಂಡ ದೆಹಲಿಯಲ್ಲಿದೆ. ಅವರನ್ನು ಕರ್ನಾಟಕ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಮಧ್ಯಾಹ್ನ 2 ಅಥವ 3 ಗಂಟೆಗೆ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ" ಎಂದರು.

"5 ಜನರ ಮತ್ತೊಂದು ತಂಡ 10.15ಕ್ಕೆ ಆಗಮಿಸಲಿದ್ದಾರೆ. ಇದುವರೆಗೂ ಕರ್ನಾಟದ 386 ಜನರು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ" ಎಂದು ಹೇಳಿದ್ದಾರೆ.

ಸಚಿವರ ಮಾತುಕತೆ; ಉಕ್ರೇನ್‌ನಿಂದ ದೆಹಲಿಗೆ ಆಗಮಿಸಿದ 250 ವಿದ್ಯಾರ್ಥಿಗಳ ಜೊತೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತುಕತೆ ನಡೆಸಿದರು. ಉಕ್ರೇನ್ ಅಧ್ಯಕ್ಷರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂಪರ್ಕದಲ್ಲಿದ್ದಾರೆ ಎಂದರು.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ಗೆ ಕರೆತಂದು ಅಲ್ಲಿಂದ ನವದೆಹಲಿಗೆ ವಿಶೇಷ ವಿಮಾನದ ಮೂಲಕ ಕರೆದುಕೊಂಡು ಬರಲಾಗುತ್ತಿದೆ. 250 ಜನರಿದ್ದ ವಿಮಾನ ಭಾನುವಾರ ಮುಂಜಾನೆ ದೆಹಲಿಗೆ ಆಗಮಿಸಿದೆ.

"ಉಕ್ರೇನ್‌ನಲ್ಲಿರುವ ಪ್ರತಿಯೊಬ್ಬರ ಭಾರತೀಯರನ್ನು ವಾಪಸ್ ಕರೆತರಲಿದ್ದೇವೆ. ಈ ಸಂದೇಶವನ್ನು ಪ್ರತಿಯೊಬ್ಬರಿಗೂ ತಲುಪಿಸಿ. ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಸಂಪರ್ಕದಲ್ಲಿದ್ದಾರೆ" ಎಂದು ಜ್ಯೋತಿರಾದಿತ್ಯ ಸಿಂಧಿಯಾ ಭರವಸೆ ನೀಡಿದರು.

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ ಮೇಲಿನ ಆಕ್ರಮಣವನ್ನು ಇನ್ನಷ್ಟು ತೀವ್ರಗೊಳಿಸಲು ರಷ್ಯಾ ಅಧ್ಯಕ್ಷ ಪುಟಿನ್ ಆದೇಶ ನೀಡಿದ್ದಾರೆ. ಇದುವರೆಗೂ 198 ಜನರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.

ಭಾರತೀಯರನ್ನು ಕರೆತರುವ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರು ಇಡಲಾಗಿದೆ. ರಷ್ಯಾ ದಾಳಿ ಆರಂಭಿಸಿದ ಬಳಿಕ ಉಕ್ರೇನ್‌ನಿಂದ ಸುಮಾರು 1 ಲಕ್ಷದಷ್ಟು ಜನರು ಪೋಲೆಂಡ್‌ಗೆ ಆಗಮಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+