Farmers Suicide: 1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಜೀವಕ್ಕೆ ಬೆಲೆ ಇಲ್ಲ. ಇದೊಂದು ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ರೈತರಿಗೆ ರಾಜ್ಯದಲ್ಲಿ ಉಜ್ವಲ ಭವಿಷ್ಯ ಇಲ್ಲದಂತಾಗಿದೆ. ಸರ್ಕಾರ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಕಡೆಗಣಿಸುತ್ತಿದೆ ಎಂದು ಅವರು ದೂರಿದ್ದಾರೆ.

1200 Farmers Suicide Farmers Lives Are Not Priced In Congress Government - Pralhad Joshi

ಸರ್ಕಾರ ರೈತರ ಸಮಸ್ಯೆಗಳಿಗೆ ಕಿವಿಗೊಡುತ್ತಿಲ್ಲ. ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಇದು ರಾಜ್ಯದಲ್ಲಿ ರೈತರ ಸಾವಿಗೆ ಕಾರಣವಾಗಿದೆ ಎಂದು ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ರಾಜ್ಯದ ರೈತರಿಗೆ ಬೆಳೆಹಾನಿ ಪರಿಹಾರದ ಅಗತ್ಯವಿದೆ. ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಅವರಿಗೆ ನೀಡಿದ ಮನವಿ ಪತ್ರ ಕಸದ ಬುಟ್ಟಿ ಸೇರಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ರೈತರಿಗೆ ಉಳಿಗಾಲ ಇಲ್ಲದಂತೆ ಕಾಣಿಸುತ್ತಿದೆ. ಕಾಂಗ್ರೆಸ್ ರೈತರ ವಿಚಾರದಲ್ಲಿ ಎಂದಿಗೂ ನುಡಿದಂತೆ ನಡೆದುಕೊಂಡಿಲ್ಲ ಎಂದು ಅವರು 'ಎಕ್ಸ್'ನಲ್ಲಿ ಬರೆದಿದ್ದಾರೆ. ಪರಿಶಿಷ್ಟರ ಪರ, ರೈತರ ಪರ, ಬಡವರ ಪರ ನಾವು ಇದ್ದೇವೆ ಎಂದು ಪುರಾಣ ಹೇಳಿ ಕಾಂಗ್ರೆಸ್ ಕೈಕಟ್ಟಿ ಕುಳಿತಿದೆ ಎಂದು ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

1200 Farmers Suicide Farmers Lives Are Not Priced In Congress Government - Pralhad Joshi

ರೈತರು ಹಾಗೂ ರೈತರ ಸಮಸ್ಯೆಗಳನ್ನು ಕಡೆಗಣಿಸುವ ಇವರಿಗೆ ಅಧಿಕಾರದಲ್ಲಿ ಇರಲು ಅರ್ಹತೆ ಇಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಇರಲು ಅರ್ಹತೆ ಇಲ್ಲ. ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಜೆಟ್ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಎನ್‌ಡಿಎ ಸರ್ಕಾರ ನವಭಾರತ ನಿರ್ಮಾಣಕ್ಕೆ ಪ್ರಸ್ತುತದಲ್ಲಿ ಅತ್ಯುತ್ತಮ ಬಜೆಟ್ ಸಮರ್ಪಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಸಿಕೊಂಡಿದ್ದಾರೆ. ಭಾರತದ ಆರ್ಥಿಕ ಪ್ರಗತಿ, ಸಾಮರ್ಥ್ಯದ ಜನತೆಗೆ ಯುವಜನತೆ, ಮಹಿಳೆಯರು ಮತ್ತಯ ರೈತರ ಅಭಿವೃದ್ಧಿಯ ಬದ್ಧತೆಯನ್ನು ಈ ಬಜೆಟ್ ಸಾಬೀತುಪಡಿಸಿದೆ ಎಂದು ಪ್ರತಿಪಾದಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ ವಿಶೇಷವಾಗಿ ಯುವ ಜನರಲ್ಲಿ ವಿಶ್ವಾಸವನ್ನು ತುಂಬುತ್ತದೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಮಧ್ಯಮ, ಕೆಳ ವರ್ಗ ಮತ್ತು ಬಡ ಜನರಿಗೆ ಪ್ರಯೋಜನಕಾರಿ ಮತ್ತಿದು ವಿಶ್ವದ ಅತ್ಯತ್ತಮ ಯೋಜನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+