ಕರ್ನಾಟಕದ 27 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊರೊನಾವೈರಸ್ ಕೇಸ್!

ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ರಾಜ್ಯದ 27 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.64ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.06ರಷ್ಟಿದೆ.

ಬೆಂಗಳೂರು ನಗರ ಹೊರತುಪಡಿಸಿದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತ್ರ 100ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 319 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದರೆ, ದಕ್ಷಿಣ ಕನ್ನಡದಲ್ಲಿ 269 ಹಾಗೂ ಉಡುಪಿಯಲ್ಲಿ 113 ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 319 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1236229ಕ್ಕೆ ಏರಿಕೆಯಾಗಿದೆ. ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15975ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7231 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಪ್ರತಿನಿತ್ಯ 1300ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 5 ಜಿಲ್ಲೆಗಳಲ್ಲಿ ಒಂದೇ ಒಂದು ಸೋಂಕಿತ ಪ್ರಕರಣಗಳು ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿಯಲ್ಲಿ ಸ್ಪಷ್ಟವಾಗುತ್ತದೆ.

ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಏರಿಳಿತವನ್ನು ನೋಡಿ

ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಏರಿಳಿತವನ್ನು ನೋಡಿ

ರಾಜ್ಯದಲ್ಲಿ ಒಂದು ದಿನದಲ್ಲಿ 1213 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1206 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 25 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37231 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2943463ಕ್ಕೆ ಏರಿಕೆಯಾಗಿದೆ. ಒಟ್ಟು 2886906 ಸೋಂಕಿತರು ಗುಣಮುಖರಾಗಿದ್ದು. 19300 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,889 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,53,298 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,87,187 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 79,38,238 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,47,07,218 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,26,45,456 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1213 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 09 ಬೆಂಗಳೂರು 319, ಬೀದರ್ 0, ಚಾಮರಾಜನಗರ11, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 21, ಚಿತ್ರದುರ್ಗ 9, ದಕ್ಷಿಣ ಕನ್ನಡ 269, ದಾವಣಗೆರೆ 12, ಧಾರವಾಡ 12, ಗದಗ 1, ಹಾಸನ 90, ಹಾವೇರಿ 1, ಕಲಬುರಗಿ 5, ಕೊಡಗು 65, ಕೋಲಾರ 15, ಕೊಪ್ಪಳ 3, ಮಂಡ್ಯ 27, ಮೈಸೂರು 97, ರಾಯಚೂರು 0, ರಾಮನಗರ 4, ಶಿವಮೊಗ್ಗ 44, ತುಮಕೂರು 19, ಉಡುಪಿ 113, ಉತ್ತರ ಕನ್ನಡ 18, ವಿಜಯಪುರ 0, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,518 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,93,063 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,36,191 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,87,222 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,33,51,525 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 65,68,271 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,94,81,599 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 92,76,024 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+