ಕರ್ನಾಟಕದಲ್ಲಿ ಒಂದೇ ದಿನ 1224 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಆಗಸ್ಟ್ 25: ಕೇರಳದಲ್ಲಿ ಓಣಂ ಹಬ್ಬದ ಮರುದಿನವೇ ಕೊವಿಡ್-19 ಮಹಾಸ್ಫೋಟ ಸಂಭವಿಸಿದ್ದು, ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.62ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1224 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1668 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 22 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37206 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2942250ಕ್ಕೆ ಏರಿಕೆಯಾಗಿದೆ. ಒಟ್ಟು 2885700 ಸೋಂಕಿತರು ಗುಣಮುಖರಾಗಿದ್ದು. 19318 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 309 ಜನರಿಗೆ ಕೊವಿಡ್-19

ರಾಜ್ಯ ರಾಜಧಾನಿಯಲ್ಲಿ 309 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 309 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235910ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15973ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7231 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 35,503 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,60,463 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,95,966 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 79,04,349 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,45,53,920 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,24,58,269 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1224 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 3, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13 ಬೆಂಗಳೂರು 309, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 28, ಚಿತ್ರದುರ್ಗ 10, ದಕ್ಷಿಣ ಕನ್ನಡ 217, ದಾವಣಗೆರೆ 11, ಧಾರವಾಡ 11, ಗದಗ 0, ಹಾಸನ 95, ಹಾವೇರಿ 3, ಕಲಬುರಗಿ 10, ಕೊಡಗು 41, ಕೋಲಾರ 17, ಕೊಪ್ಪಳ 2, ಮಂಡ್ಯ 38, ಮೈಸೂರು 102, ರಾಯಚೂರು 1, ರಾಮನಗರ 1, ಶಿವಮೊಗ್ಗ 42, ತುಮಕೂರು 52, ಉಡುಪಿ 130, ಉತ್ತರ ಕನ್ನಡ 48, ವಿಜಯಪುರ 3, ಯಾದಗಿರಿ 8 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,492 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,91,247 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,36,041 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,80,258 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,32,70,856 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 64,92,868 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,91,60,322 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 91,10,386 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+