Breaking: ಕರ್ನಾಟಕದಲ್ಲಿ ಡಬಲ್ ಆಯ್ತು ಹೊಸ ಕೋವಿಡ್ ಪ್ರಕರಣ!
ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ದಿನದಲ್ಲಿ ಡಬಲ್ ಆಗಿದೆ. ಅಂದರೆ ನಿನ್ನೆವರೆಗೂ 600 ಆಸುಪಾಸಿನಲ್ಲಿದ್ದ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆ 1200 ಗಡಿ ದಾಟಿದೆ.
ರಾಜ್ಯದಲ್ಲಿ 24 ಗಂಟೆಗಳಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ಪ್ರಮಾಣವು ಶೇ.4.78ರಷ್ಟಾಗಿದೆ. ಅದೇ ರೀತಿ ಏಳು ದಿನಗಳಲ್ಲಿ ಪಾಸಿಟಿವಿಟಿ ಪ್ರಮಾಣವು ಶೇ.4.31ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲೇ 1231 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1047 ಸೋಂಕಿತರು ಗುಣಮುಖರಾಗಿದ್ದು, ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಕೋವಿಡ್-19 ಅಂಕಿ-ಅಂಶಗಳು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3981816 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3935088 ಸೋಂಕಿತರು ಗುಣಮುಖರಾಗಿದ್ದು, 40,083 ಜನರು ಕೋವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 6603 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿಗರೇ ಎಚ್ಚರ ಎಚ್ಚರ: ಕರ್ನಾಟಕದಲ್ಲಿ 1124 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 953 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1815473ಕ್ಕೆ ಏರಿಕೆಯಾಗಿದೆ. ಇದುವರೆಗೂ 1792344 ಸೋಂಕಿತರು ಗುಣಮುಖರಾಗಿದ್ದರೆ, 16970 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವುದು ಖಾತ್ರಿಯಾಗುತ್ತಿದೆ.












Click it and Unblock the Notifications