ಕರ್ನಾಟಕದಲ್ಲಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳೆಷ್ಟು, ಮೃತಪಟ್ಟವರೆಷ್ಟು?
ಬೆಂಗಳೂರು, ಮೇ 31: ರಾಜ್ಯದಲ್ಲಿ ಇದುವರೆಗೆ 1250 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದೆ, ಅದರಲ್ಲಿ 39 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಧಾರವಾಡದಲ್ಲಿ 119 ಮಂದಿಗೆ ಸೋಂಕು ಉಂಟಾಗಿದ್ದು, ಎಂಟು ಮಂದಿ ಬಲಿಯಾಗಿದ್ದಾರೆ. ಉಳಿದ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಲ್ಲಿ 102 ಮಂದಿಗೆ ಸೋಂಕು ಉಂಟಾಗಿದ್ದು, 94 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರ ಒಂದರಲ್ಲಿಯೇ 521 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ಉಂಟಾಗಿದ್ದು, ಇದರಲ್ಲಿ 508 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 10 ಮಂದಿ ಮಾತ್ರ ಗುಣಮುಖರಾಗಿದ್ದಾರೆ. 3 ಜನರು ಮೃತಪಟ್ಟಿದ್ದಾರೆ. ಡೆತ್ ಆಡಿಟ್ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಧಾರವಾಡ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ.

ಚಿಕ್ಕಮಗಳುರೂ, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ: ಎಂದು ಆರೋಗ್ಯ ಇಲಾಖೆ ಅಂಕಿ-ಅಂಶ ಬಿಡಗುಡೆ ಮಾಡಿದೆ. ಸಾವಿನ ಸಂಖ್ಯೆ ಇನ್ನೂ ಸ್ಪಷ್ಟನೆ ಮೂಡಬೇಕಿದ್ದು, ಈ ಕುರಿತು ಡೆತ್ ಆಡಿಟ್ ನಡೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ .
ರಾಜ್ಯದಲ್ಲಿ ಒಂದು ದಿನದಲ್ಲಿ 20378 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 382 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 28053 ಸೋಂಕಿತರು ಗುಣಮುಖರಾಗಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,87,827 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 22,17,117 ಸೋಂಕಿತರು ಗುಣಮುಖರಾಗಿದ್ದು, 3,42,010 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications