ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Explainer: ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊರೊನಾ ವೈರಸ್ ಪರೀಕ್ಷೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಂಕಿನ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಸೋಂಕಿನ ಲಕ್ಷಣಗಳಿರುವ ಎಲ್ಲರಿಗೂ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 28034 ಮಂದಿಗೆ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ 1255 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3 ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಅದೇ ರೀತಿ 2186 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Work From Home ವೇಳೆಯಲ್ಲಿ ಮಂದಿಗೆ 'ಅಂಥ' ವಿಡಿಯೋಗಳದ್ದೇ ಹುಚ್ಚು!?Work From Home ವೇಳೆಯಲ್ಲಿ ಮಂದಿಗೆ 'ಅಂಥ' ವಿಡಿಯೋಗಳದ್ದೇ ಹುಚ್ಚು!?

ಕರ್ನಾಟಕದಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9775ಕ್ಕೆ ತಲುಪಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲೇ ಅತಿಹೆಚ್ಚು ಕೇಸ್

ಸಿಲಿಕಾನ್ ಸಿಟಿಯಲ್ಲೇ ಅತಿಹೆಚ್ಚು ಕೇಸ್

ಕರ್ನಾಟಕದಲ್ಲಿ 1255 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 747 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1473 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲೇ 6925 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಒಟ್ಟು 4044819 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಇದುವರೆಗೂ 3994823 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಸೋಂಕಿನಿಂದ 40179 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯಲ್ಲಿ ಗೊತ್ತಾಗಿದೆ.

ರಾಜ್ಯದಲ್ಲಿ ಹೇಗಿದೆ ಕೋವಿಡ್-19 ಪಾಸಿಟಿವಿಟಿ ದರ?

ರಾಜ್ಯದಲ್ಲಿ ಹೇಗಿದೆ ಕೋವಿಡ್-19 ಪಾಸಿಟಿವಿಟಿ ದರ?

ಕರ್ನಾಟಕದಲ್ಲಿ ಈಗಾಗಲೇ ಕೋವಿಡ್-19 ಸೋಂಕಿತರ ಸಂಖ್ಯೆಯು 1200 ಗಡಿ ದಾಟಿದ್ದು ಆಗಿದೆ. ಅಂದರೆ ಸೋಂಕಿತರ ತಪಾಸಣೆ ವೇಳೆ ಪಾಸಿಟಿವಿಟಿ ದರದಲ್ಲಿ ಏರಿಕೆ ಆಗಿರುವುದು ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ದರವು ಶೇ.4.47ರಷ್ಟಿದೆ. ಅದೇ ಒಂದು ವಾರದಲ್ಲಿ ವರದಿ ಆಗಿರುವ ಪ್ರಕರಣಗಳ ಆಧಾರದ ಮೇಲೆ ಪಾಸಿಟಿವಿಟಿ ದರವನ್ನು ನೋಡುವುದಾದರೆ ಅದು ಶೇ.5.40ರಷ್ಟಿದೆೆ.

ಜಿಲ್ಲಾವಾರು ಕೋವಿಡ್-19 ಸೋಂಕಿತರ ಸಂಖ್ಯೆ?

ಜಿಲ್ಲಾವಾರು ಕೋವಿಡ್-19 ಸೋಂಕಿತರ ಸಂಖ್ಯೆ?

ರಾಜ್ಯದಲ್ಲಿ ಒಟ್ಟು 1255 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 8, ಬಳ್ಳಾರಿ 20, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು 747, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 16, ಚಿತ್ರದುರ್ಗ 1, ದಕ್ಷಿಣ ಕನ್ನಡ 19, ದಾವಣಗೆರೆ 9, ಧಾರವಾಡ 19, ಗದಗ 9, ಹಾಸನ 45, ಹಾವೇರಿ 7, ಕಲಬುರಗಿ 17, ಕೊಡಗು 13, ಕೋಲಾರ 29, ಕೊಪ್ಪಳ 2, ಮಂಡ್ಯ 19, ಮೈಸೂರು 114, ರಾಯಚೂರು 21, ರಾಮನಗರ 49, ಶಿವಮೊಗ್ಗ 24, ತುಮಕೂರು 10, ಉಡುಪಿ 9, ಉತ್ತರ ಕನ್ನಡ 14, ವಿಜಯಪುರ 6, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಒಂದೇ ದಿನ 10,649 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 10,649 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,649 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 10,677 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,368,195ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,744,301 ಸೋಂಕಿತರು ಗುಣಮುಖರಾಗಿದ್ದು, 527,452 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 96,442ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 4,07,096 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,35,23,886 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
1255 New Covid-19 Cases Reported in Karnataka in last 24 Hours. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X