ಕರ್ನಾಟಕದ 12 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊವಿಡ್-19 ಸಕ್ರಿಯ ಪ್ರಕರಣ

ಬೆಂಗಳೂರು, ಆಗಸ್ಟ್ 24: ಕರ್ನಾಟಕದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 20,000ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.65ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.30ರಷ್ಟಿದೆ.

ಕಳೆದ ಒಂದೇ ದಿನ 1259 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 29 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37184ಕ್ಕೆ ಏರಿಕೆಯಾಗಿದೆ. ಇನ್ನೊಂದು ದಿಕ್ಕಿನಲ್ಲಿ ಇದೇ ಅವಧಿಯಲ್ಲಿ 1701 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 295 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235601ಕ್ಕೆ ಏರಿಕೆಯಾಗಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2941026ಕ್ಕೆ ಏರಿಕೆಯಾಗಿದೆ. ಒಟ್ಟು 2884032 ಸೋಂಕಿತರು ಗುಣಮುಖರಾಗಿದ್ದು. 19784 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ರಾಜ್ಯದ 12 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರುವುದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿಯಲ್ಲಿ ಸ್ಪಷ್ಟವಾಗಿದೆ.

12 ಜಿಲ್ಲೆಗಳಲ್ಲಿ ಕೊವಿಡ್-19 ಸಕ್ರಿಯ ಪ್ರಕರಣಗಳು ಇಳಿಮುಖ

12 ಜಿಲ್ಲೆಗಳಲ್ಲಿ ಕೊವಿಡ್-19 ಸಕ್ರಿಯ ಪ್ರಕರಣಗಳು ಇಳಿಮುಖ

ರಾಜ್ಯದ ಒಂದು ದಿಕ್ಕಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ 12 ಜಿಲ್ಲೆಗಳಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇರಿಕೆ ಕಂಡು ಬಂದಿದೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1259 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 13 ಬೆಂಗಳೂರು 295, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 49, ಚಿತ್ರದುರ್ಗ 23, ದಕ್ಷಿಣ ಕನ್ನಡ 273, ದಾವಣಗೆರೆ 30, ಧಾರವಾಡ 3, ಗದಗ 1, ಹಾಸನ 69, ಹಾವೇರಿ 1, ಕಲಬುರಗಿ 12, ಕೊಡಗು 38, ಕೋಲಾರ 7, ಕೊಪ್ಪಳ 7, ಮಂಡ್ಯ 20, ಮೈಸೂರು 102, ರಾಯಚೂರು 4, ರಾಮನಗರ 1, ಶಿವಮೊಗ್ಗ 59, ತುಮಕೂರು 43, ಉಡುಪಿ 128, ಉತ್ತರ ಕನ್ನಡ 51, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 44,503 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,46,412 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,90,915 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 78,68,846 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,43,93,457 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,22,62,303 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,466 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,88,883 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,35,874 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,72,672 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,39,68,819 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 64,15,874 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,88,67,535 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 89,42,964 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+