• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ 28 ಜಿಲ್ಲೆಗಳಲ್ಲಿ100ಕ್ಕಿಂತ ಕಡಿಮೆ ಕೊವಿಡ್-19 ಪ್ರಕರಣ

|
Google Oneindia Kannada News

ಬೆಂಗಳೂರು, ಆಗಸ್ಟ್ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕ್ರಮೇಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.70ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.34ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1384 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37278 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಕೊರೊನಾವೈರಸ್ ಸೋಂಕಿನಿಂದ ಪಾರಾಗಲು ಮೂರನೇ ಡೋಸ್ ಬೇಕಾ!?ಕೊರೊನಾವೈರಸ್ ಸೋಂಕಿನಿಂದ ಪಾರಾಗಲು ಮೂರನೇ ಡೋಸ್ ಬೇಕಾ!?

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2947255ಕ್ಕೆ ಏರಿಕೆಯಾಗಿದೆ. ಒಟ್ಟು 2891193 ಸೋಂಕಿತರು ಗುಣಮುಖರಾಗಿದ್ದು. 18758 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 361 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1237286ಕ್ಕೆ ಏರಿಕೆಯಾಗಿದೆ. ಆರು ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15983ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7343 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,032 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,45,632 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,78,664 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 80,39,600 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,51,55,062 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,31,94,662 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

      ತುಮಕೂರಲ್ಲಿ ಮಳೆ ಬಂದ್ರೆ ವಾಹನಗಳಿಗೆ ತೇಲ್ಕೊಂಡ್ ಹೋಗೋ ಭಾಗ್ಯ | Oneindia Kannada

      ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
      ರಾಜ್ಯದಲ್ಲಿ ಒಟ್ಟು 1262 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 9 ಬೆಂಗಳೂರು 361, ಬೀದರ್ 0, ಚಾಮರಾಜನಗರ 13, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 26, ಚಿತ್ರದುರ್ಗ 22, ದಕ್ಷಿಣ ಕನ್ನಡ 202, ದಾವಣಗೆರೆ 28, ಧಾರವಾಡ 6, ಗದಗ 0, ಹಾಸನ 72, ಹಾವೇರಿ 5, ಕಲಬುರಗಿ 5, ಕೊಡಗು 86, ಕೋಲಾರ 54, ಕೊಪ್ಪಳ 1, ಮಂಡ್ಯ 14, ಮೈಸೂರು 86, ರಾಯಚೂರು 1, ರಾಮನಗರ 1, ಶಿವಮೊಗ್ಗ 59, ತುಮಕೂರು 34, ಉಡುಪಿ 96, ಉತ್ತರ ಕನ್ನಡ 42, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

      ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
      ರಾಜ್ಯದಲ್ಲಿ ಈವರೆಗೂ 7,62,601 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,02,026 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,36,819 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,14,152 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,55,63,326 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 68,67,694 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,09,91,540 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 99,84,601 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

      English summary
      1262 New Coronavirus Cases Reported in Karnataka Today, State Tally Rise to 2947255
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X