ನೆರೆ ರಾಜ್ಯಗಳ ಆತಂಕದ ನಡುವೆಯೂ ಕರ್ನಾಟಕದಲ್ಲಿ ಕೊರೊನಾ ಇಳಿಮುಖ

ಬೆಂಗಳೂರು, ಆಗಸ್ಟ್ 02: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದ್ದು, ನೆರೆ ರಾಜ್ಯಗಳ ಆತಂಕದ ನಡುವೆಯೂ ನಿನ್ನೆಗಿಂತ ಕಡಿಮೆ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಮೂರನೇ ಅಲೆ ಭೀತಿಯ ನಡುವೆ ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿತ್ತು. ಆದರೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಬಾರ್ಡರ್‌ಗಳಲ್ಲಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1285 ಕೊರೊನಾ ಸೋಂಕು ಪತ್ತೆಯಾಗಿದ್ದು, 1383 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25 ಆಗಿದೆ.

1285 New Covid- 19 Positive Cases Reported In Karnataka On August 2nd

ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,08,284ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ- 36,612 ಆಗಿದೆ. ಇಲ್ಲಿಯವರೆಗೆ ಒಟ್ಟು 28,47,627 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದ ಪಾಸಿಟಿವಿಟಿ ದರ ಶೇ. 0.96ಗೆ ಇಳಿದಿದ್ದು, ಕೋವಿಡ್ ಡೆತ್ ರೇಟ್ ಶೇ.1.94ರಷ್ಟು ಇದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ಮಾಡಿದೆ.

ವಿವಿಧ ಜಿಲ್ಲೆಗಳ ಕೋವಿಡ್ ವರದಿ
ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 290 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,28,038ಕ್ಕೆ ಏರಿದ್ದರೆ, ಸಕ್ರಿಯ ಪ್ರಕರಣಗಳು 8670 ಇವೆ.

ಇನ್ನು ಕೇರಳ ಗಡಿ ಹಂಚಿಕೊಂಡಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ 219 ಪ್ರಕರಣಗಳು, ಮೈಸೂರು ಜಿಲ್ಲೆಯಲ್ಲಿ 102 ಪ್ರಕರಣಗಳು, ಉಡುಪಿ ಜಿಲ್ಲೆಯಲ್ಲಿ 135 ಪ್ರಕರಣಗಳು, ತುಮಕೂರು ಜಿಲ್ಲೆಯಲ್ಲಿ 73 ಪ್ರಕರಣಗಳು, ಬೆಳಗಾವಿ 24, ಶಿವಮೊಗ್ಗ 34 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.

ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 13, ಚಿಕ್ಕಮಗಳೂರು 36, ಹಾಸನ 91, ಕೊಡಗು 81, ಕೋಲಾರ 35, ಮಂಡ್ಯ ಜಿಲ್ಲೆಯಲ್ಲಿ 26 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಬಾಗಲಕೋಟೆ 6, ಬಳ್ಳಾರಿ 4, ಬೀದರ್ 3 ಪ್ರಕರಣಗಳು ಪತ್ತೆಯಾಗಿವೆ. ಚಾಮರಾಜನಗರ 17, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 18, ಧಾರವಾಡ 8, ಗದಗ 9, ಹಾವೇರಿ 1, ಕಲಬುರಗಿ 5, ಕೊಪ್ಪಳ 2, ದಾವಣಗೆರೆಯಲ್ಲಿ 4 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 41 ಸೋಂಕು ಪ್ರಕರಣಗಳು, ಯಾದಗಿರಿಯಲ್ಲಿ 1, ರಾಯಚೂರು ಜಿಲ್ಲೆಯಲ್ಲಿ 1 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಸಾರ್ವಜನಿಕರಿಗೆ ಮನವಿ:
ಕೋವಿಡ್- 19 ಸೋಂಕಿತ ವ್ಯಕ್ತಿಯೊಂದಿಗೆ ವೈಯಕ್ತಿಕ ಸಂಪರ್ಕ ಹೊಂದಿದ್ದಲ್ಲಿ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 ಆಪ್ತಮಿತ್ರ ಆರೋಗ್ಯ ಸಹಾಯವಾಣಿಗೆ ಕರೆಮಾಡಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್‍ನ ಸೂಕ್ತ ನಡವಳಿಕೆಗಳಾದ, ವೈಯ್ಯಕ್ತಿಕ ನೈರ್ಮಲ್ಯ, ಮೂಗು ಮತ್ತು ಬಾಯಿ ಎರಡನ್ನೂ ಆವರಿಸುವ ಮುಖಕವಚವನ್ನು ಧರಿಸಿ, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ / ಟಿಶ್ಯೂ ಪೇಪರನ್ನು ಬಳಸಿ, ಆಗಾಗ ಸಾಬೂನು ಮತ್ತು ನೀರಿನಿಂದ ಕೈಗಳನ್ನು ತೊಳೆದುಕೊಳ್ಳಿ.

Recommended Video

      ದೆಹಲಿಯಲ್ಲೇ ಬೀಡುಬಿಟ್ಟಿರುವ ಬಸವರಾಜ್ ಬೊಮ್ಮಾಯಿ! | Oneindia Kannada

      ಕೈ ಸ್ವಚ್ಛಗೊಳಿಸುವ ದ್ರಾವಣ (ಸ್ಯಾನಿಟೈಸರ್) ಬಳಸುವುದರೊಂದಿಗೆ, ದೈಹಿಕ ಅಂತರವನ್ನು ಪಾಲಿಸಿ, ಸಾಮೂಹಿಕ ಸಾಮಾಜಿಕ ಗುಂಪು-ಕೂಟಗಳಿಗೆ ಹಾಜರಾಗುವುದನ್ನು ನಿಷೇಧಿಸುವುದರ ಮೂಲಕ ಕೋವಿಡ್- 19ರ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+