ಕರ್ನಾಟಕದಲ್ಲಿ ಒಂದೇ ದಿನ 1290 ಮಂದಿಗೆ ಕೊರೊನಾವೈರಸ್: 1.60ರಷ್ಟಾದ ಪಾಸಿಟಿವಿಟಿ ದರ
ಬೆಂಗಳೂರು, ಜನವರಿ 3: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನಕ್ಕೊಂದು ದಾಖಲೆ ಬರೆಯುತ್ತಿವೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 1,200ದ ಗಡಿ ದಾಟಿದ್ದು, ಪಾಸಿಟಿವಿಟಿ ದರ ಶೇ.1.60ರಷ್ಟಾಗಿದೆ. ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.38ರಷ್ಟಿದೆ.
ಕಳೆದ ಒಂದೇ ದಿನದಲ್ಲಿ 1290 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 232 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38351 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3010847ಕ್ಕೆ ಏರಿಕೆಯಾಗಿದೆ. ಒಟ್ಟು 2961122 ಸೋಂಕಿತರು ಗುಣಮುಖರಾಗಿದ್ದು. 11345 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಭೀತಿ
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 1041 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1266392ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16408ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 9575 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1240408 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 12,555 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 67,854 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 80,409 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,07,11,944 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 4,60,64,798 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,67,76,742 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ
ರಾಜ್ಯದಲ್ಲಿ ಒಟ್ಟು 1290 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 11, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 8 ಬೆಂಗಳೂರು 1041, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 52, ದಾವಣಗೆರೆ 2, ಧಾರವಾಡ 19, ಗದಗ 1, ಹಾಸನ 11, ಹಾವೇರಿ 0, ಕಲಬುರಗಿ 9, ಕೊಡಗು 10, ಕೋಲಾರ 6, ಕೊಪ್ಪಳ 1, ಮಂಡ್ಯ 13, ಮೈಸೂರು 14, ರಾಯಚೂರು 2, ರಾಮನಗರ 0, ಶಿವಮೊಗ್ಗ 13, ತುಮಕೂರು 6, ಉಡುಪಿ 43, ಉತ್ತರ ಕನ್ನಡ 2, ವಿಜಯಪುರ 5, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?
ಕೊರೊನಾವೈರಸ್ ಸೋಂಕಿನ ಯಾವ ರೂಪಾಂತರಿಯು ಹೆಚ್ಚು ಹರಡುತ್ತಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ:
ಅಲ್ಫಾ/ B.1.1.7 - 156
ಬೀಟಾ/ B.1.351 - 08
ಡೆಲ್ಟಾ / B.1.617.2 - 2937
ಡೆಲ್ಟಾ ಪ್ಲಸ್ - 1350
ಕಪ್ಪಾ / B.1.617.1 - 160
ETA / B.1.525 - 01
ಓಮಿಕ್ರಾನ್/ B.1.1.529 - 77












Click it and Unblock the Notifications