ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಅಪ್ಡೇಟ್‌ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

Good News: ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವನ್ನು ತೆಗದುಕೊಳ್ಳುತ್ತಲಿರುತ್ತದೆ. ಇನ್ನು ಇದೀಗ ಶಿಕ್ಷಕರ ನೇಮಕಾತಿ ಬಗ್ಗೆ ಮಹತ್ವದ ಅಪ್ಡೇಟ್‌ ಅನ್ನು ಸಚಿವ ಮಧು ಬಂಗಾರಪ್ಪ ಕೊಟ್ಟಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ದೇಶ ವಿವಿಧ ರಂಗಗಳಲ್ಲಿ ಮುಂದುವರೆಯಲು ಸಾಧ್ಯ. ಇದನ್ನು ಗಮನದಲ್ಲಿಟ್ಟುಕೊಂಡೇ 13,000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

13 000 Teachers to be recruitment in Karnataka says Minister Madhu bangarappa

ಚನ್ನಗಿರಿಯ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಗುರುಭವನ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯಕ್ಕಾಗಿ ಮುಂದಿನ ಪೀಳಿಗೆಗೆ ನಾವು ಏನಾದರೂ ಕೊಡುಗೆ ನೀಡಬೇಕಾಗಿದ್ದರೆ ಅದು ಶಿಕ್ಷಣಕ್ಕೆ ಆಗಿರಬೇಕು ಎಂದು ಹೇಳಿದರು.

ಶಿಕ್ಷಣವೇ ನಿರ್ಣಾಯಕ ಆಗಿದ್ದು, ಇದಕ್ಕಾಗಿ ಶಿಕ್ಷಕರು ಪ್ರಾಮಾಣಿಕವಾಗಿ ಸೇವೆ ಸಲಿಸುತ್ತಿದ್ದಾರೆ. ಶಿಕ್ಷಣ ಎನ್ನುವುದು ನಿರಂತರವಾಗಿರುತ್ತದೆ. ಇದಕ್ಕೆ ಯಾವುದೇ ಅಂತಿಮ ಇರುವುದಿಲ್ಲ ಎಂದು ಹೇಳಿದರು. ಇನ್ನು ವಲಸೆ ಹೋಗಿ ಗಂಡ, ಹೆಂಡತಿ ಇಬ್ಬರೂ ದುಡಿಯುತ್ತಿದ್ದರೆ, ಮಕ್ಕಳು ಅಲ್ಲೇ ಆಟ ಆಡುತ್ತಿದ್ದರು. ಇದನ್ನು ಗಮನಿಸಿದ ದಿವಗಂತ ಬಂಗಾರಪ್ಪ ಅವರು ಅಂಗನವಾಡಿಗಳನ್ನು ತೆರೆದರು. ಇದರಿಂದ ಶಿಕ್ಷಣ ವಂಚಿತ ಮಕ್ಕಳು ಸಹ ಶಿಕ್ಷಣ ಪಡೆಯಲು ಸಾಧ್ಯ ಆಯಿತು ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ ವಿಧ್ಯಾರ್ಥಿಗಳಿಗೆ ಶೇಕಡ 15ರಷ್ಟು ಅಂಕ ನೀಡಿ ಗ್ರಾಮೀಣ ಭಾಗದಲ್ಲಿ ಓದಿದವರಿಗೆ ವಿದ್ಯಾಭ್ಯಾಸ ಮತ್ತು ನೌಕರಿಯಲ್ಲಿ ನೆರವಾಗಿದ್ದರು. ಅಷ್ಟೇ ಅಲ್ಲದೆ, ಆಶ್ರಯ ಯೋಜನೆ ಮತ್ತು ಆರಾಧನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಗ್ರಾಮೀಣ ಜನರಿಗೆ ತುಂಬಾ ಸಹಾಯಕವಾಯಿತು ಎಂದು ಹೇಳಿದರು.

ಇನ್ನು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತುಂಬಾ ಜನರಿಗೆ ಅನುಕೂಲ ಆದಂತಾಗಿದೆ. ಪ್ರಾಣಾಳಿಕೆಯಲ್ಲಿ ತಿಳಿಸಿದಂತೆ ಹಳೆ ಪಿಂಚಣಿ ಪದ್ಧತಿಯನ್ನು ಜಾರಿಗೆ ತರಲಿದ್ದು, ಇದರಿಂದ ಲಕ್ಷಾಂತರ ನೌಕರರಿಗೆ ಅನುಕೂಲ ಆಗಲಿದೆ. ಇಲಾಖೆಯಲ್ಲಿ ಈಗಾಗಲೇ ವೃಂದ ಮತ್ತು ನೇಮಕಾತಿ ನಿಯಮಗಳನ್ನ ತಿದ್ದುಪಡಿ ಮಾಡಲಾಗಿದ್ದು, ಇದರಿಂದ ಶಿಕ್ಷಕರಿಗೆ ಮುಂಬಡ್ತಿಯಲ್ಲಿ ಅನುಕೂಲ ಆಗಲಿದೆ. ಇದನ್ನು ಆದಷ್ಟು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಲಾಗಿದೆ. ಮತ್ತು ವರ್ಗಾವಣೆಗೆ ಕಾಯುತ್ತಿದ್ದ 36,000 ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ ಪರೀಕ್ಷಾ ಸುಧಾರಣೆಗೂ ಕ್ರಮವಹಿಸಲಾಗಿದ್ದು, ಎಸ್‌ಎಸ್ಎಲ್‌ಸಿ ಪರೀಕ್ಷೆಯನ್ನು ನೇರವಾಗಿ ವೀಕ್ಷಿಸಲು ಎಲ್ಲಾ ಕೇಂದ್ರಗಳ ಕೊಠಡಿಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಿ ಪರೀಕ್ಷಾ ಅವ್ಯವಹಾರ ನಿಯಂತ್ರಿಸಲಾಗಿದೆ. ಮತ್ತು ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗಿದೆ, ಸ್ಮಾರ್ಟ್ ಕ್ಲಾಸ್ ಜಾರಿಗೆ ತಂದಿದ್ದು, ಇದರಿಂದ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ ಆಗುತ್ತಿದೆ ಎಂದು ಹೇಳಿದರು. ಹೀಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+