Karnataka Graduate Teachers Recruitment : ಪದವೀಧರ ಶಿಕ್ಷಕರ ನೇಮಕಾತಿ: 13,351 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಸಚಿವ ಬಿಸಿ ನಾಗೇಶ್, ಕರ್ನಾಟಕ ಹೈಕೋರ್ಟ್ ಆದೇಶದಂತೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು , ಮಾರ್ಚ್ 08: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಬುಧವಾರ ಅಂತಿಮ ಪಟ್ಟಿ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ 6 ರಿಂದ 8 ನೇ ತರಗತಿಗಳಿಗೆ 13,351 ಪದವೀಧರ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಹಲವು ದಿನಗಳೀಮದ ಅಂತಿಮ ಪಟ್ಟಿಗಾಗಿ ಕಾದು ಕುಳಿತಿದ್ದ ಅಭ್ಯರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ಅವರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಂದರೆ ಜೂನ್ 2023 ರೊಳಗೆ ಈ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಕೆಲಸಕ್ಕೆ ಸೇರುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಬಿಸಿ ನಾಗೇಶ್, ಕರ್ನಾಟಕ ಹೈಕೋರ್ಟ್ ಆದೇಶದಂತೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

13,351 Candidates Selected in Final Selection List of Graduate Teacher Recruitment

ಈ ಹಿಂದೆ, ತಮ್ಮ ತಂದೆಯ ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಪರಿಗಣಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪಣೆಗಳನ್ನೂ ಇಲಾಖೆ ಆಹ್ವಾನಿಸಿತ್ತು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು. ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ 13,351 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಎಲ್ಲ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಮುಂದಿನ ಶೈಕ್ಷಣಿಕ ಅವಧಿಯೊಳಗೆ ಶಾಲೆಗಳನ್ನು ನಿಯೋಜಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಸಿದ ಇಲಾಖೆ, ಕಳೆದ ವರ್ಷ 1:1 (ಒಂದು ಹುದ್ದೆಗೆ ಒಬ್ಬ ಶಿಕ್ಷಕ) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಆದರೆ, ತಮ್ಮ ತಂದೆಯ ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸಿದ ವಿವಾಹಿತ ಮಹಿಳೆಯರನ್ನು ಪಟ್ಟಿಯಲ್ಲಿ ಪರಿಗಣಿಸದೆ ಸಾಮಾನ್ಯ ವರ್ಗಕ್ಕೆ ಸೇರಿಸಲಾಯಿತು. ನಂತರ ಅಭ್ಯರ್ಥಿಗಳು ಹೈಕೋರ್ಟ್‌ನ ಮೊರೆ ಹೋಗಿದ್ದರು.

ಫೆಬ್ರವರಿಯಲ್ಲಿ, ಈ ಮಹಿಳಾ ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಪರಿಗಣಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿ, 2022 ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತು. 15,000 ಶಿಕ್ಷಕರ ಹುದ್ದೆಗಳ ಪೈಕಿ ಉಳಿದ 1,649 ಹುದ್ದೆಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿ ಮಾಡಬೇಕಿದೆ.

ಇನ್ನು, ಬುಧವಾರ ಅಂತಿಮ ಪಟ್ಟಿ ಪ್ರಕಟ ಮಾಡುವ ಬಗ್ಗೆ ಮಾಹಿತಿ ನಿಡಿದ್ದ ಸಚಿವ ಬಿಸಿ ನಾಗೇಶ್, "15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು" ಎಂದಿದ್ದರು. ಅದರಂತೆಯೇ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+