ಕರ್ನಾಟಕದಲ್ಲಿ ಒಂದೇ ದಿನ 1300 ಗಡಿ ದಾಟಿದ ಕೊರೊನಾವೈರಸ್ ಸಂಖ್ಯೆ
ಬೆಂಗಳೂರು, ಆಗಸ್ಟ್ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕ್ರಮೇಣ ಏರಿಕೆಯಾಗಿದೆ. ಗುರುವಾರ 1213 ಹೊಸ ಪ್ರಕರಣಗಳು ವರದಿಯಾಗಿದ್ದರೆ, ಶುಕ್ರವಾರ 1300ಕ್ಕಿಂತ ಹೆಚ್ಚು ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.69ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.30ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1301 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1614 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37248 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಕೋವಿಡ್‌ನಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ 1 ಲಕ್ಷಕ್ಕೂ ಅಧಿಕ ಮಕ್ಕಳು
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2944764ಕ್ಕೆ ಏರಿಕೆಯಾಗಿದೆ. ಒಟ್ಟು 2888520 ಸೋಂಕಿತರು ಗುಣಮುಖರಾಗಿದ್ದು. 18970 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 386 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1236615ಕ್ಕೆ ಏರಿಕೆಯಾಗಿದೆ. ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15977ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7341 ಸಕ್ರಿಯ ಪ್ರಕರಣಗಳಿವೆ.
ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 34,081 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,52,819 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,86,900 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 79,72,319 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,48,60,007 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,28,32,356 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 1301 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13 ಬೆಂಗಳೂರು 386, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 248, ದಾವಣಗೆರೆ 16, ಧಾರವಾಡ 6, ಗದಗ 1, ಹಾಸನ 117, ಹಾವೇರಿ 4, ಕಲಬುರಗಿ 7, ಕೊಡಗು 78, ಕೋಲಾರ 14, ಕೊಪ್ಪಳ 1, ಮಂಡ್ಯ 26, ಮೈಸೂರು 72, ರಾಯಚೂರು 0, ರಾಮನಗರ 3, ಶಿವಮೊಗ್ಗ 62, ತುಮಕೂರು 37, ಉಡುಪಿ 106, ಉತ್ತರ ಕನ್ನಡ 38, ವಿಜಯಪುರ 4, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,62,538 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,96,596 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,36,460 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,97,765 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,34,91,613 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 66,86,932 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,00,36,685 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 95,44,806 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications