ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 1336 ಹೊಸ ಕೋವಿಡ್ ಪ್ರಕರಣ ಪತ್ತೆ

|
Google Oneindia Kannada News

ಬೆಂಗಳೂರು, ನವೆಂಬರ್ 17 : ಕರ್ನಾಟಕದಲ್ಲಿ 1,336 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 2,100 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಂಗಳವಾರದ ಹೊಸ ಕೋವಿಡ್ ಪ್ರಕರಣಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 1,336 ಹೊಸ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,27,241ಕ್ಕೆ ಏರಿಕೆಯಾಗಿದೆ.

ಕರ್ನಾಟಕ; ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ ಕರ್ನಾಟಕ; ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ

1336 New COVID Cases In Karnataka On November 17

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆ ಕಾಣುತ್ತಿರುವ ದರ 95.72% ರಷ್ಟಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ನವೆಂಬರ್ 17ರಂದು ಯಾವುದೇ ಕೋವಿಡ್ ರೋಗಿ ಮರಣ ಹೊಂದಿಲ್ಲ. ಮರಣ ಪ್ರಮಾಣ 1.39% ರಷ್ಟಿದೆ.

ಕಾನ್ಪುರದಲ್ಲಿ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಪ್ರಯೋಗ ಕಾನ್ಪುರದಲ್ಲಿ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಪ್ರಯೋಗ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಇದುವರೆಗೂ 8,27,241 ಜನರು ಗುಣಮುಖರಾಗಿದ್ದಾರೆ. 11,557 ಜನರು ಮೃತಪಟ್ಟಿದ್ದಾರೆ. ಮಂಗಳವಾರ ಮೃತಪಟ್ಟವರ ಸಂಖ್ಯೆ 16.

ಕರ್ನಾಟಕದಲ್ಲಿ ಕೊವಿಡ್-19 ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕರ್ನಾಟಕದಲ್ಲಿ ಕೊವಿಡ್-19 ಸಂಖ್ಯೆಯಲ್ಲಿ ದಾಖಲೆಯ ಇಳಿಕೆ

ರಾಜ್ಯದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 25,323. 693 ಜನರು ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ರಾಜ್ಯದಲ್ಲಿ 75,384 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ.

ಯಾವ ಜಿಲ್ಲೆ ಎಷ್ಟು ಪ್ರಕರಣ? ; ಬೆಂಗಳೂರು ನಗರದಲ್ಲಿ ಮಂಗಳವಾರ 729 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,58,606ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,707.

Recommended Video

ಎಷ್ಟ್ ದಿನ ಮೋಸ ಮಾಡ್ತಾರೋ ಮಾಡ್ಲಿ!! | Oneindia Kannada

ಮಂಗಳವಾರ ಬೆಂಗಳೂರು ಗ್ರಾಮಾಂತರದಲ್ಲಿ 40, ದಕ್ಷಿಣ ಕನ್ನಡ 30, ದಾವಣಗೆರೆ 24, ಹಾಸನ 30, ಮಂಡ್ಯ 38, ಮೈಸೂರು 52, ತುಮಕೂರು 89, ಉತ್ತರ ಕನ್ನಡ 32 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

English summary
Karnataka registered 1,336 new COVID cases on November 17. 2,100 people discharged from hospital and state total rally raised to 8,27,241.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X