IAS Officers Transfer: ರಾಜ್ಯದಲ್ಲಿ ಇಷ್ಟು ಮಂದಿ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ
IAS Officers Transfer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರ ಸರ್ಜರಿ ಮಾಡುತ್ತಿರುತ್ತದೆ. ಇದೀಗ ರಾಜ್ಯದಲ್ಲಿ 14 ಐಎಎಸ್ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣವೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿದೆ. ಪ್ರಮುಖವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ದೆಹಲಿಯ ಕರ್ನಾಟಕ ಭವನದ ಉನ್ನತ ಹುದ್ದೆಗಳಲ್ಲಿ ಈ ಬದಲಾವಣೆಗಳಾಗಿವೆ. ಸದ್ಯ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಮೇಜರ್ ಮನಿವಣ್ಣನ್ ಪಿ ಅವರಿಗೆ ಹೆಚ್ಚುವರಿಯಾಗಿ ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರ ಹುದ್ದೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ನವದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ (ಪ್ರಾದೇಶಿಕ ಆಯುಕ್ತರು) ಹುದ್ದೆಯಲ್ಲಿದ್ದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರನ್ನು ಹೊಸದಾಗಿ ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಯಾರು ಎಲ್ಲಿಂದ ಎಲ್ಲಿಗೆ ವರ್ಗಾವಣೆ?
* ಮೇಜರ್ ಮಣಿವಣ್ಣನ್ ಪಿ: ಬಿಡಿಎ ಆಯುಕ್ತ ಮೇಜರ್ ಇವರಿಗೆ ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನ ವಹಿಸಲಾಗಿದೆ.
* ಇಮ್ಕಾಂಗ್ಲಾ ಜಮೀರ್ ಎಂ: ನವದೆಹಲಿಯ ಕರ್ನಾಟಕ ಭವನದ ಪ್ರಾದೇಶಿಕ ಆಯುಕ್ತ ಇಮ್ಕೋಂಗ್ಲಾ ಜಮೀರ್ ಅವರನ್ನು ಕರ್ನಾಟಕ ಭವನದ ಕಾರ್ಯದರ್ಶಿ(ಸಂಯೋಜನೆ)ಯಾಗಿ ವರ್ಗಾವಣೆ ಮಾಡಲಾಗಿದೆ.
* ಡಾ. ಪ್ರಸಾದ್ ಎನ್. ವಿ: ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಇವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
* ಸಮೀರ್ ಶುಕ್ಲಾ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಇವರನ್ನು ಕರ್ನಾಟಕ ಭವನದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
* ತುಳಸಿ ಮದ್ದಿನೇನಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಣೆ ಮಾಡಲಾಗಿದೆ.
* ರಣದೀಪ್ ಡಿ.: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
* ಶಿವಕುಮಾರ್ ಕೆ. ಬಿ.: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
* ಡಾ.ರಾಮ್ ಪ್ರಸಾತ್ ಮನೋಹರ್ ವಿ.: ಇವರಿಗೆ ಪ್ರಸ್ತುತ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
* ಡಾ. ಸತೀಶ ಬಿ. ಸಿ.: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ ಇವರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
* ಅಕ್ರಮ್ ಪಾಷಾ: ಸ್ಥಳ ನಿರೀಕ್ಷೆಯಲ್ಲಿದ್ದ ಅಕ್ರಮ್ ಪಾಷ ಅವರನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ಆಯುಕ್ತಾಲಯದ ಯೋಜನಾ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
* ರಘುನಂದನ್ ಮೂರ್ತಿ: ಪ್ರಸ್ತುತ ಖಜಾನೆ ಇಲಾಖೆಯ ಆಯುಕ್ತರಾಗಿರುವ ಇವರಿಗೆ ಹೆಚ್ಚುವರಿಯಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹೊಣೆಗಾರಿಕೆಯನ್ನು ವಹಿಸಲಾಗಿದೆ.
* ನಿತೀಶ್ ಕೆ.: ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಪೌರಾಡಳಿತ ಇಲಾಖೆಯ ನಿರ್ದೇಶಕರು ಹಾಗೂ ಬಿಬಿಎಂಪಿಯ ವಿಶೇಷ ಆಯುಕ್ತರು (ಆರೋಗ್ಯ ಮತ್ತು ಶಿಕ್ಷಣ) ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
* ಜ್ಞಾನೇಂದ್ರ ಕುಮಾರ್ ಗಂಗ್ವಾರ್: ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಇವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
* ಗಜಾನನ್ ಬಾಲೆ: ಪ್ರಸ್ತುತ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಆರ್ ಅಂಡ್ ಆರ್ ಹಾಗೂ ಭೂ ಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿರುವ ಇವರಿಗೆ ಬಾಗಲಕೋಟೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.












Click it and Unblock the Notifications