14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿದ ಯಡಿಯೂರಪ್ಪ
Recommended Video
ಬೆಂಗಳೂರು, ಆಗಸ್ಟ್ 01 : ಮುಖ್ಯಮಂತ್ರಿಗಳು ಮತ್ತು ಇತರ ಸಚಿವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಿವೃತ್ತ ನೌಕರರನ್ನು ಬಿಡುಗಡೆ ಮಾಡಲಾಗಿದೆ. ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿವೃತ್ತ ಅಧಿಕಾರಿಗಳ ನೇಮಕ ಗುತ್ತಿಗೆ ಆಧಾರದಲ್ಲಿ ನಡೆದಿತ್ತು.
ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ. ಎಸ್. ಯಡಿಯೂರಪ್ಪ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಲವರು ಸಿಎಂ ಗೃಹ ಕಚೇರಿಯಲ್ಲಿ, ಕೆಲವರು ವಿವಿಧ ಸಚಿವರ ಕಚೇರಿಯಲ್ಲಿ ಕೆಲಸಕ್ಕೆ ನಿಯೋಜನೆಗೊಂಡಿದ್ದರು.
ಮುಖ್ಯಮಂತ್ರಿಗಳ ಕಚೇರಿ ಮತ್ತು ಸಚಿವರ ಆಪ್ತ ಶಾಖೆಗಳಲ್ಲಿ ಇದ್ದ 23 ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕಳಿಸಲಾಗಿದೆ. ಈ ಮೂಲಕ ಯಡಿಯೂರಪ್ಪ ಆಡಳಿತಯಂತ್ರವನ್ನು ಚುರುಕುಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಎಸ್. ಸುಬ್ರಮಣ್ಯ, ಬಿ. ಎನ್. ಕೃಷ್ಣಯ್ಯ, ಕೆ. ವಿಶ್ವನಾಥರೆಡ್ಡಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.
ಎಂ. ನಾರಾಯಣಪ್ಪ, ಕೆ.ಆರ್.ಶಿವಕುಮಾರ್, ಎಲ್.ಚನ್ನಕೇಶವಮೂರ್ತಿ, ಎಂ. ಜಿ. ಗೂಳಿಗೌಡ, ಎಂ. ಸಿ. ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಗಳ ಕಚೇರಿ ಸೇರಿದಂತೆ ಹಲವು ಇಲಾಖೆಗಳಲ್ಲಿ ವರ್ಗಾವಣೆ ನಡೆಯಲಿದೆ.












Click it and Unblock the Notifications