ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Urban Local Body Election Results Live : 14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

|
Google Oneindia Kannada News

ಬೆಂಗಳೂರು, ನವೆಂಬರ್ 14 : ಕರ್ನಾಟಕದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಒಟ್ಟು 418 ವಾರ್ಡ್‌ಗಳಿಗೆ ನವೆಂಬರ್ 12ರಂದು ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಗುರುವಾರ ಬೆಳಗ್ಗೆ 8 ಗಂಟೆಗೆ ಆಯಾ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪಟ್ಟಣ ಪಂಚಾಯಿತಿ, 3 ಪುರಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.

ಉಪ ಚುನಾವಣೆ; ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿ ಹೆಸರು!ಉಪ ಚುನಾವಣೆ; ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿ ಹೆಸರು!

ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

14 Urban Local Bodies Elections Result Karnataka

ಚುನಾವಣೆ ವಿವರ

* ನಗರ ಸಭೆ : ಕನಕಪುರ, ಕೋಲಾರ, ಮುಳಬಾಗಿಲು, ಕೆ. ಜಿ. ಎಫ್., ಗೌರಿ ಬಿದನೂರು, ಚಿಂತಾಮಣಿ
* ಪುರಸಭೆ : ಬೀರೂರು, ಮಾಗಡಿ, ಕಂಪ್ಲಿ
* ಪಟ್ಟಣ ಪಂಚಾಯಿತಿ : ಕೂಡ್ಲಗಿ, ಕುಂದಗೋಳ, ಜೋಗ್-ಕಾರ್ಗಲ್
* ಮಹಾನಗರ ಪಾಲಿಕೆ : ದಾವಣಗೆರೆ ಮತ್ತು ಮಂಗಳೂರು

Newest FirstOldest First
12:35 PM, 14 Nov

ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ವಶವಾಗಿದೆ. 60 ವಾರ್ಡ್‌ಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್‌ಡಿಪಿಐ 2 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ. ಮಂಗಳೂರು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ಕ್ಷೇತ್ರ.
12:31 PM, 14 Nov

ಮಾಗಡಿ ಪುರಸಭೆ ಜೆಡಿಎಸ್ ಪಾಲಾಗಿದೆ. 23 ವಾರ್ಡ್‌ಗಳ ಪೈಕಿ ಜೆಡಿಎಸ್ 12 ಸ್ಥಾನದಲ್ಲಿ ಜಯಗಳಿಸಿದೆ. ಕಾಂಗ್ರೆಸ್‌ನ 10, ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೆಚ್ಚಿದೆ.
12:26 PM, 14 Nov

ಕೋಲಾರ ನಗರ ಸಭೆ 35 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ 3, ಕಾಂಗ್ರೆಸ್ 12, ಜೆಡಿಎಸ್ 8, 12 ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಅತಂತ್ರ ಫಲಿತಾಂಶ ಬಂದಿದ್ದು, ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಬೇಕಿದೆ.
11:08 AM, 14 Nov

ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಚುನಾವಣೆಯಲ್ಲಿ 4 ಮತ್ತು 5ನೇ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ತಾಯಿ-ಮಗ ಇಬ್ಬರೂ ಸೋತಿದ್ದಾರೆ.
10:59 AM, 14 Nov

ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ನಂಬರ್ 5ರ ಕಾಟಿಪಳ್ಳ ಉತ್ತರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಶಂಶಾದ್ ಅಬೂಬಕರ್ 2766 ಮತಗಳನ್ನು ಪಡೆದು ಗೆಲುವು ಸಾಧಿಸಿದರು.
10:45 AM, 14 Nov

ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪುರಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. 23 ವಾರ್ಡ್‌ಗಳಲ್ಲಿ ಬಿಜೆಪಿ 10, ಕಾಂಗ್ರೆಸ್ 9, ಜೆಡಿಎಸ್ 2, ಮತ್ತು 2 ವಾರ್ಡ್‌ಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
10:42 AM, 14 Nov

ಕನಕಪುರ ನಗರಸಭೆ ಕಾಂಗ್ರೆಸ್ ವಶವಾಗಿದೆ. 31 ವಾರ್ಡ್‌ಗಳ ಪೈಕಿ 26 ವಾರ್ಡ್‌ಗಳಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್, 1 ವಾರ್ಡ್‌ನಲ್ಲಿ ಬಿಜೆಪಿಗೆ ಜಯ ಸಿಕ್ಕಿದೆ. ಕನಕಪುರ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ತವರು ಕ್ಷೇತ್ರ.
Advertisement
10:34 AM, 14 Nov

ಕಂಪ್ಲಿ ಪುರಸಭೆಯ 8 ವಾರ್ಡ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ರಾಜೇಶ್ 11 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇಂದು ರಾಜೇಶ್ ಅವರ ವಿವಾಹ ನಡೆಯುತ್ತಿದೆ. ಚುನಾವಣೆಯಲ್ಲಿ ಅವರು ಗೆಲ್ಲುವ ನಿರೀಕ್ಷೆ ಹೊಂದಿದ್ದರು.
10:30 AM, 14 Nov

ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್‌ಗಳಲ್ಲಿ ಬಿಜೆಪಿ 21, ಕಾಂಗ್ರೆಸ್ 12, ಇತರರು 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಮತ ಎಣಿಕೆ ಇನ್ನು ನಡೆಯುತ್ತಿದೆ.
10:18 AM, 14 Nov

ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ವಶವಾಗಿದೆ. 45 ವಾರ್ಡ್‌ಗಳಲ್ಲಿ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1, 5 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದರು. ಕಳೆದ ಬಾರಿಯೂ ಪಾಲಿಕೆ ಅಧಿಕಾರ ಕಾಂಗ್ರೆಸ್ ಕೈಯಲ್ಲಿ ಇತ್ತು.
10:07 AM, 14 Nov

ಶಿವಮೊಗ್ಗ ಜಿಲ್ಲೆಯ ಜೋಗ-ಕಾರ್ಗಲ್ ಪಟ್ಟಣ ಪಂಚಾಯತಿ ಬಿಜೆಪಿಗೆ ಸಿಕ್ಕಿದೆ. 11 ವಾರ್ಡ್‌ಗಳ ಪೈಕಿ 9ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿತ್ತು. 11 ವಾರ್ಡ್‌ಗಳ ಪೈಕಿ ಬಿಜೆಪಿ 9, ಕಾಂಗ್ರೆಸ್ 1, ಪಕ್ಷೇತರ 1 ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
10:04 AM, 14 Nov

ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 21, ಪದವು ಪಶ್ಚಿಮದಲ್ಲಿ ಬಿಜೆಪಿಯ ವನಿತಾ ಪ್ರಸಾದ್ 1051 ಮತಗಳಿಂದ ಗೆಲವು, ವಾರ್ಡ್‌ ಸಂಖ್ಯೆ 57ರಲ್ಲಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ 1,313 ಮತಗಳಿಂದ ಗೆಲುವು
Advertisement
9:57 AM, 14 Nov

ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣ ಪಂಚಾಯಿತಿ 19 ವಾರ್ಡ್‌ನಲ್ಲಿ ಬಿಜೆಪಿ 11, ಕಾಂಗ್ರೆಸ್ 5, ಇತರರು 2 ಸ್ಥಾನದಲ್ಲಿ ಜಯಗಳಿಸಿದ್ದಾರೆ.
9:56 AM, 14 Nov

ಕನಕಪುರ ನಗರಸಭೆಯ 31 ವಾರ್ಡ್‌ಗಳಲ್ಲಿ ಕಾಂಗ್ರೆಸ್ 26, ಜೆಡಿಎಸ್ 4, ಬಿಜೆಪಿ 1 ಕ್ಷೇತ್ರದಲ್ಲಿ ಜಯಗಳಿಸಿದೆ.
9:55 AM, 14 Nov

ಕೋಲಾರ ನಗರಸಭೆಯ 16 ವಾರ್ಡ್‌ಗಳ ಪೈಕಿ 5ರಲ್ಲಿ ಕಾಂಗ್ರೆಸ್, 2ರಲ್ಲಿ ಬಿಜೆಪಿ, 4ರಲ್ಲಿ ಜೆಡಿಎಸ್, 5ರಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದರು.
9:39 AM, 14 Nov

ದಾವಣಗೆರೆ ಮಹಾನಗರ ಪಾಲಿಕೆಯ 37, 28ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 37 ವಾರ್ಡ್‌ನಲ್ಲಿ ಶ್ವೇತಾ, 28ನೇ ವಾರ್ಡ್‌ನಲ್ಲಿ ಶ್ರೀನಿವಾಸ್ ಜಯಗಳಿಸಿದ್ದು ಇವರಿಬ್ಬರು ಪತ್ನಿ ಪತ್ನಿ. ಕಣಕ್ಕಿಳಿದಿದ್ದರು. ಇಬ್ಬರೂ ಗೆಲುವು ಸಾಧಿಸಿದ್ದಾರೆ.
9:35 AM, 14 Nov

ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪುರಸಭೆ ಚುನಾವಣೆ ಫಲಿತಾಂಶ ಪ್ರಕಟ 23 ವಾರ್ಡ್‌ಗಳಲ್ಲಿ ಬಿಜೆಪಿ 8, ಕಾಂಗ್ರೆಸ್ 4, ಜೆಡಿಎಸ್ 1, ಪಕ್ಷೇತರ 1 ಕ್ಷೇತ್ರದಲ್ಲಿ ಗೆಲುವು
9:32 AM, 14 Nov

ಮಂಗಳೂರು ಮಹಾನಗರ ಪಾಲಿಕೆಯಲ್ಲಿ 60 ವಾರ್ಡ್‌ಗಳಿದ್ದು, 180 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
9:31 AM, 14 Nov

ಮಂಗಳೂರು ಮಹಾನಗರ ಪಾಲಿಕೆ ವಾರ್ಡ್‌ ಸಂಖ್ಯೆ 41ರ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬಿಜೆಪಿಯ ಪೂರ್ಣಿಮಾ ಗೆಲುವು.
9:31 AM, 14 Nov

ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 1 ಸುರತ್ಕಲ್ ಪಶ್ಚಿಮದಲ್ಲಿ ಬಿಜೆಪಿಯ ಶೋಭಾ ರಾಜೇಶ್ 225 ಮತಗಳ ಅಂತರದಿಂದ ಪಕ್ಷೇತರ ಅಭ್ಯರ್ಥಿಯನ್ನು ಸೋಲಿಸಿದರು.
9:27 AM, 14 Nov

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆಯ ಉಪ ಚುನಾವಣೆಯಲ್ಲಿ 17ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ರಾಜುಗೌಡಪ್ಪಗೋಳ 139 ಮತಗಳ ಅಂತರದಿಂದ ಗೆದ್ದಿದ್ದಾರೆ.
9:26 AM, 14 Nov

ಜೋಗ್-ಕಾರ್ಗಲ್ ಪಟ್ಟಣ ಪಂಚಾಯಿತಿಯ ಚುನಾವಣೆಯಲ್ಲಿ 11 ವಾರ್ಡ್‌ಗಳಲ್ಲಿ ಬಿಜೆಪಿ 8, ಕಾಂಗ್ರೆಸ್ 6, ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
9:23 AM, 14 Nov

ಕಂಪ್ಲಿ ಪುರಸಭೆಯ 8ನೇ ವಾರ್ಡ್ ಚುನಾವಣಾ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜೇಶ್ ಇಂದು ವಿವಾಹವಾಗುತ್ತಿದ್ದಾರೆ. ಇಂದೇ ಚುನಾವಣಾ ಫಲಿತಾಂಶ ಸಹ ಪ್ರಕಟವಾಗುತ್ತಿದೆ.
9:23 AM, 14 Nov

ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ನಲ್ಲಿ ಕಾಂಗ್ರೆಸ್ 2, ಬಿಜೆಪಿ 9 ಸ್ಥಾನದಲ್ಲಿ ಮುಂದಿದೆ.
9:23 AM, 14 Nov

ಡಿ. ಕೆ. ಶಿವಕುಮಾರ್ ಸ್ವ ಕ್ಷೇತ್ರ ಕನಕಪುರದಲ್ಲಿ 7 ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕನಕಪುರ ನಗರಸಭೆಯಲ್ಲಿ 31 ವಾರ್ಡ್‌ಗಳಿವೆ.

English summary
Counting underway for the 14 urban local bodies of Karnataka. Election held on November 12, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X