ಬಾಲಮಂದಿರಗಳಿಂದ 141 ಮಕ್ಕಳು ನಾಪತ್ತೆ: ತನಿಖೆಯ ವಿವರ ನೀಡುವಂತೆ ಸರ್ಕಾರಕ್ಕೆ HC ಆದೇಶ

ಬೆಂಗಳೂರು, ಫೆ.22: ರಾಜ್ಯದ ಸರ್ಕಾರಿ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ವಿವರಗಳನ್ನು ನೀಡುವಂತೆ ಹೈಕೋರ್ಟ್, ಸರ್ಕಾರಕ್ಕೆ ಮಂಗಳವಾರ ನಿರ್ದೇಶನ ನೀಡಿತು.
ಕೋಲಾರದ ಕೆ.ಸಿ.ರಾಜಣ್ಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ಮತ್ತು ನ್ಯಾ. ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ವಾದ ಆಲಿಸಿದ ಬಳಿಕ ಸರ್ಕಾರಕ್ಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಗೆ ನೋಟಿಸ್ ನೀಡಿ ವಿಚಾರಣೆಯನ್ನು ಮಾ.9ಕ್ಕೆ ಮುಂದೂಡಿತು.

ಅಲ್ಲದೆ, ಅಷ್ಟರಲ್ಲಿ ಅರ್ಜಿದಾರರು ತಿಳಿಸಿರುವಂತೆ ರಾಜ್ಯದ ಸರ್ಕಾರಿ ಮಕ್ಕಳ ಆರೈಕೆ ಕೇಂದ್ರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ಕ್ರಮಗಳು, ತನಿಖೆಯ ಸ್ಥಿತಿಗತಿಯ ವಿವರವನ್ನು ಸರ್ಕಾರ ನೀಡಬೇಕು ಎಂದು ಆದೇಶಿಸಿತು.

141 children missing from Government Remand Homes: High Court seeks details of investigation

ಬಾಲ ನ್ಯಾಯ ಪೊಲೀಸ್ ಠಾಣೆಗಳಿಲ್ಲ:
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮಹಿಳಾ ಮತ್ತು ಮಕ್ಕಳ ಇಲಾಖೆ ಆರ್ ಟಿ ಐ ನೀಡಿರುವ ಮಾಹಿತಿಯಂತೆ 2015-16ರಿಂದ 2021ರ ಅಕ್ಟೋಬರ್ ವರೆಗೆ ರಾಜ್ಯದ ಸರ್ಕಾರಿ ಚೈಲ್ಡ್ ಕೇರ್ ಕೇಂದ್ರಗಳಿಂದ 420 ಮಕ್ಕಳು ನಾಪತ್ತೆಯಾಗಿರುವ ಪ್ರಕರಣಗಳ ಎಫ್ ಐಆರ್ ದಾಖಲಾಗಿವೆ, ಆದರೆ ಈವರೆಗೂ ಇನ್ನೂ 141 ಮಕ್ಕಳು ಪತ್ತೆಯಾಗಿಲ್ಲ. ಆ ಬಗ್ಗೆ ಪೊಲೀಸರು ತನಿಖೆಯನ್ನೂ ನಡೆಸಿಲ್ಲ ಎಂದರು.

ಬಾಲ ನ್ಯಾಯ ಕಾಯಿದೆ ಪ್ರಕಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಮಕ್ಕಳ ನಾಪತ್ತೆ ಪ್ರಕರಣಗಳಿಗಾಗಿ ಪ್ರತ್ಯೇಕ ಪೊಲೀಸ್ ಘಟಕಗಳನ್ನು ಹೊಂದಿರಬೇಕು, ಆದರೆ ರಾಜ್ಯದಲ್ಲಿ ಅಂತಹ ವ್ಯವಸ್ಥೆ ಇಲ್ಲ. ಮಾಮೂಲಿ ಪೊಲೀಸ್ ದೂರು ನೀಡಿದ್ದರೂ ಏನೂ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಮಕ್ಕಳ ರಕ್ಷಣೆ ಇಲ್ಲದಾಗಿದೆ ಎಂದು ಅವರು ನ್ಯಾಯಪೀಠಕ್ಕೆ ವಿವರಿಸಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚುತ್ತಿವೆ. ಆದರೆ ಪೊಲೀಸರು ಅಂತಹ ಪ್ರಕರಣಗಳಲ್ಲಿ ಯಾವುದೇ ಕ್ರಮ ಜರುಗಿಸುತ್ತಿಲ್ಲ, ಗಂಭೀರವಾಗಿ ತನಿಖೆಯನ್ನೂ ನಡೆಸುತ್ತಿಲ್ಲ. ಕಾಟಾಚಾರಕ್ಕೆ ದೂರು ದಾಖಲಿಸಿಕೊಂಡು ಸುಮ್ಮನಾಗುತ್ತಾರೆ, ಹಾಗಾಗಿ ಇಂತಹ ಗಂಭೀರ ಪ್ರಕರಣಗಳಲ್ಲಿ ಸೂಕ್ತ ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಬೇಕು ಅರ್ಜಿಯಲ್ಲಿ ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+