ಎಚ್ಚರ: ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 1432 ಮಂದಿಗೆ ಕೊರೊನಾವೈರಸ್!
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಮಿತಿಮೀರಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.80ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.88ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1432 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1538 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37088 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2934624ಕ್ಕೆ ಏರಿಕೆಯಾಗಿದೆ. ಒಟ್ಟು 2876377 ಸೋಂಕಿತರು ಗುಣಮುಖರಾಗಿದ್ದು. 21133 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 318 ಜನರಿಗೆ ಕೊವಿಡ್-19
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 318 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1234157ಕ್ಕೆ ಏರಿಕೆಯಾಗಿದೆ. 2 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15955ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7942 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 34,649 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,42,328 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,76,977 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 77,22,835 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,37,86,522 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,15,09,357 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 1432 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 11 ಬೆಂಗಳೂರು 318, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 32, ಚಿತ್ರದುರ್ಗ 9, ದಕ್ಷಿಣ ಕನ್ನಡ 326, ದಾವಣಗೆರೆ 28, ಧಾರವಾಡ 7, ಗದಗ 1, ಹಾಸನ 94, ಹಾವೇರಿ 3, ಕಲಬುರಗಿ 6, ಕೊಡಗು 72, ಕೋಲಾರ 20, ಕೊಪ್ಪಳ 2, ಮಂಡ್ಯ 30, ಮೈಸೂರು 103, ರಾಯಚೂರು 4, ರಾಮನಗರ 5, ಶಿವಮೊಗ್ಗ 47, ತುಮಕೂರು 46, ಉಡುಪಿ 162, ಉತ್ತರ ಕನ್ನಡ 42, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,62,390 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,72,830 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,35,129 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,32,507 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,30,78,016 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 61,16,844 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,76,95,581 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 82,98,787 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications