ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 1454 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯವಿಲ್ಲ..!

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಜು.29. ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,099 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಲಾಗಿದ್ದು, ಇನ್ನೂ 1,454 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಬೇಕಾಗಿದೆ.

ಹೀಗೆಂದು ರಾಜ್ಯ ಸರ್ಕಾರವೇ ಹೇಳಿದೆ. ಅದು ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಇಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಬಗ್ಗೆ ರಾಜ್ಯದ ಎಲ್ಲಾ 31 ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ಹೈಕೋರ್ಟ್‌ಗೆ ಗುರುವಾರ ನೀಡಿದೆ.

2019ರಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ಕಾರ ಪಾಲನೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಮ್ಮದ್‌ ಇಕ್ಬಾಲ್‌ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆ ಬಂದಿತ್ತು.

1454 villages dont have graveyard: State submitted before HC

ಆಗ ಸರ್ಕಾರದ ಪರ ವಕೀಲರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಸಲ್ಲಿಸಿರುವ ಸಮಗ್ರ ಮಾಹಿತಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ಈ ಮಾಹಿತಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಸರ್ಕಾರ ಒದಗಿಸಿರುವ ಮಾಹಿತಿ ಪರಿಶೀಲಿಸಿ ವಾಸ್ತವ ಸಂಗತಿ ಏನಿದೆ ಎಂದು ಹೋಲಿಕೆ ಮಾಡಿ ಎರಡು ವಾರಗಳಲ್ಲಿವರದಿ ನೀಡುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ಸರ್ಕಾರ, ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಇಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಬಗ್ಗೆ ರಾಜ್ಯದ ಎಲ್ಲಾ31 ಜಿಲ್ಲೆಗಳ ಗ್ರಾಮವಾರು ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ 2022ರ ಜೂ.30ರಂದು ಆದೇಶ ನೀಡಿತ್ತು. ಅದರಂತೆ ಸರ್ಕಾರ, ಎಲ್ಲಾ31 ಜಿಲ್ಲೆಗಳ 27,099 ಗ್ರಾಮಗಳಲ್ಲಿಸ್ಮಶಾನ ಜಾಗ ಒದಗಿಸಿರುವ ಜಿಲ್ಲಾಧಿಕಾರಿಗಳ ಆದೇಶ, ಆರ್‌ಟಿಸಿ ಮತ್ತು ಕಂದಾಯ ದಾಖಲೆಗಳ ಸಮಗ್ರ ಮಾಹಿತಿಯನ್ನು ಸಲ್ಲಿಸಿದೆ.

ಟೆಂಪೋದಲ್ಲಿ ದಾಖಲೆ:

ಸ್ಮಶಾನ ಸೌಲಭ್ಯ ಒದಗಿಸಿರುವ ಬಗ್ಗೆ ಗ್ರಾಮವಾರು ವಿವರ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅದರಂತೆ, ಸ್ಮಶಾನ ಸೌಲಭ್ಯ ಒದಗಿಸಿರುವ 27,099 ಗ್ರಾಮಗಳಲ್ಲಿ ಸ್ಮಶಾನ ಜಾಗ ಮಂಜೂರು ಮಾಡಿ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶದ ಪ್ರತಿಗಳು, ಆರ್‌ಟಿಸಿ ಮತ್ತಿತರರ ಕಂದಾಯ ದಾಖಲೆಗಳು ಸೇರಿದಂತೆ 31 ಜಿಲ್ಲೆಗಳ 27 ಸಾವಿರಕ್ಕೂ ಹೆಚ್ಚು ದಾಖಲೆಗಳ ದೊಡ್ಡ ಬಂಡಲ್‌ಗಳನ್ನು ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇಷ್ಟೊಂದು ದೊಡ್ಡ ಪ್ರಮಾಣದ ದಾಖಲೆಗಳು ಎಲ್ಲಿವೆ ಎಂದು ನ್ಯಾಯಪೀಠ ಕೇಳಿತು. ಅದಕ್ಕೆ ಕೋರ್ಟ್‌ನ ಹೊರಗಡೆ ಟೆಂಪೋದಲ್ಲಿ ತರಲಾಗಿದೆ ಎಂದು ಸರ್ಕಾರಿ ವಕೀಲರು ಹೇಳಿದರು. ಆ ದಾಖಲೆಗಳನ್ನು ವಾಪಸ್‌ ತೆಗೆದುಕೊಂಡು ಹೋಗಿ ಅಗತ್ಯ ಬಿದ್ದಾಗ ತರಿಸಿಕೊಳ್ಳುತ್ತೇವೆ ಎಂದು ಎಂದು ನ್ಯಾಯಪೀಠ ಹೇಳಿತು.

53 ಗ್ರಾಮಗಳಲ್ಲಿ ಹೆಣ ಹೂಳಲು ಜಾಗವಿಲ್ಲ:

ಬೆಂಗಳೂರು ನಗರ ಜಿಲ್ಲೆಯ 813 ಗ್ರಾಮಗಳ ಪೈಕಿ 760 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒಗದಿಸಲಾಗಿದೆ. ಬಾಕಿ 53 ಗ್ರಾಮಗಳ ಪೈಕಿ 28 ಗ್ರಾಮಗಳಲ್ಲಿಸರ್ಕಾರಿ ಜಮೀನು ಇಲ್ಲದೇ ಇರುವುದರಿಂದ ಪಕ್ಕದ ಗ್ರಾಮದ ಸ್ಮಶಾನಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. 23 ಗ್ರಾಮಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವುದರಿಂದ ಚಿತಾಗಾರಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಉಳಿದಂತೆ 2 ಗ್ರಾಮಗಳು ಹಿಂದಿನಿಂದಲೂ ಪಕ್ಕದ ಗ್ರಾಮದ ಸ್ಮಶಾನವನ್ನು ಉಪಯೋಗಿಸಿರುತ್ತಾರೆ ಎಂದು ಸರ್ಕಾರ ಮಾಹಿತಿ ಒದಗಿಸಿದೆ.

Recommended Video

ತೇಜಸ್ವಿ ಸೂರ್ಯ ನಿಮ್ಗೆ ಜನರಿಗೆ ರಕ್ಷಣೆ ಕೊಡೋಕಾಗಿಲ್ಲ ಅಂದ್ಮೇಲೆ ಅಧಿಕಾರ ಯಾಕ್ರೀ ಬೇಕು ?? | Oneindia Kannada

English summary
Out of the total 29,616 villages in the state, 27,099 villages have been provided with burial facilities so far, and another 1,454 villages need to be provided graveyards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X