₹14,690 ಕೋಟಿ ವೆಚ್ಚದ ರಾಜ್ಯದ ಪ್ರಮುಖ ಹೆದ್ದಾರಿಗಳ ಬಗ್ಗೆ ಸಿಎಂ ಬಿಗ್ ಅಪ್‌ಡೇಟ್
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿತ್ತು. ರಾಜ್ಯ ಪ್ರಮುಖ ಹೆದ್ದಾರಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ವಾಗ್ದಾಳಿ ನಡೆಸಿತ್ತು. ಇದಕ್ಕೆ ಅಂಕಿಅಂಶ ಸಮೇತವಾಗಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ನಮ್ಮ ಸರ್ಕಾರವು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಸೇರಿ ಸುಗಮ ಸಂಚಾರ ವ್ಯವಸ್ಥೆಗಾಗಿ ಬರೋಬ್ಬರಿ 14,690 ಕೋಟಿ ರೂಪಾಯಿ ಕೋಟಿ ಖರ್ಚು ಮಾಡಿದೆ ಎಂಬ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಗಂಭೀರ ಆರೋಪ ಮಾಡಿತ್ತು. ಅರ್ಧಕ್ಕೆ ನಿಂತಿರುವ ಹೆದ್ದಾರಿಗಳು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಿಡಿದ ಕೈಗನ್ನಡಿಯಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂದು ಆರೋಪಿಸಿತ್ತು.
2023ರ ನಂತರ ಹೆದ್ದಾರಿ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಒಂದೇ ಒಂದು ಬಿಡಿಗಾಸು ಸಿಕ್ಕಿಲ್ಲ. ಲಕ್ಷಾಂತರ ಕೋಟಿ ರೂಪಾಯಿ ಖರ್ಚಾದರೂ ಜನರಿಗೆ ಗುಂಡಿ ರಸ್ತೆಗಳು, ಅಪಘಾತಗಳು, ನರಕಯಾತನೆ ಮಾತ್ರವೇ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಸಮರ್ಥತೆ, ನಿರ್ಲಕ್ಷ್ಯದಿಂದ ಜನಜೀವನ ರಸ್ತೆ ಮಧ್ಯೆ ನಿಂತಿದೆ ಎಂದು ಟೀಕಿಸಿತ್ತು.

ಬಿಜೆಪಿಯಿಂದ ಲಕ್ಷಾಂತರ ಕೋಟಿ ಸಾಲದ ಹೊರೆ
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರವು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ, ಸೇತುವೆಗಳು ಹಾಗೂ ಸಿಸಿ ರಸ್ತೆಗಳ ನಿರ್ಮಾಣ ಸೇರಿದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಈವರೆಗೆ ರೂ.14,690 ಕೋಟಿ ಖರ್ಚು ಮಾಡಿದೆ ಎಂದು ಲೆಕ್ಕ ಕೊಟ್ಟಿದ್ದಾರೆ.
ಈ ಸಾಲಿನಲ್ಲಿ ಇನ್ನಷ್ಟು ಯೋಜನೆಗಳು ಜಾರಿಯಾಗಲಿದ್ದು, ಮಳೆಯಿಂದಾಗಿ ರಸ್ತೆ, ಸೇತುವೆ ನಿರ್ಮಾಣದಂತಹ ಕಾಮಗಾರಿಗಳಿಗೆ ಅಡಚಣೆಯಾಗಿದೆ. ಅವುಗಳನ್ನು ಅನುಷ್ಠಾನ ಮಾಡಿಯೇ ಮಾಡುತ್ತೇವೆ. ಬಿಜೆಪಿ ಈ ಹಿಂದೆ ಶೇ 40 ಪರ್ಸೆಂಟ್ ಕಮಿಷನ್ ಆಸೆಗೆ ಬೇಕಾಬಿಟ್ಟಿ ಯೋಜನೆಗಳಿಗೆ ಅನುಮತಿ ಕೊಟ್ಟು, ಲಕ್ಷಾಂತರ ಕೋಟಿ ಸಾಲದ ಪಾಪದ ಗಂಟನ್ನು ನಮ್ಮ ತಲೆಗೆ ಹೊರಿಸಿ ಹೋಗಿದೆ. ಈಗ ಬಿಜೆಪಿ ನಾಯಕರೇ ಯಾವ ಮುಖ ಇಟ್ಟುಕೊಂಡು ನಮ್ಮ ಬಗ್ಗೆ ಟೀಕೆ ಮಾಡುತ್ತೀರಿ? ಎಂದು ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ-ಕಾಂಗ್ರೆಸ್ ನಡುವೆ ಹೆದ್ದಾರಿ ವಾರ್
ಬಿಜೆಪಿಯು ಪ್ರಸ್ತುತ ₹3 ಲಕ್ಷ ಕೋಟಿ ಮೊತ್ತದ ರಾಜ್ಯದ ಹೆದ್ದಾರಿ ಯೋಜನೆಗಳು ಜಾರಿಯಲ್ಲಿದ್ದು, ಮುಂದಿನ 5 ವರ್ಷಗಳಲ್ಲಿ ₹5 ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳು ನೆರವೇರಲಿವೆ. ಈ ಮೊತ್ತವು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಾರಿ ಮಂಡಿಸಿದ ಬಜೆಟ್‌ಗಿಂತಲೂ ಹೆಚ್ಚು ಎಂದು ವಾಗ್ದಾಳಿ ನಡೆಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳು ನಿಂತುಹೋಗಿದ್ದು, ಹೆದ್ದಾರಿ ಯೋಜನೆಗಳಿಗೆ ಒಂದೇ ಒಂದು ಬಿಡಿಗಾಸು ಸಿಕ್ಕಿಲ್ಲ ಎನ್ನುವ ಬಿಜೆಪಿ ಆರೋಪಕ್ಕೆ ಸಿಎಂ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಪ್ರಮುಖ ಹೆದ್ದಾರಿ ಸೇರಿ ರಸ್ತೆ ಸಂಚಾರ ಮಾರ್ಗಗಳ ಅಭಿವೃದ್ಧಿಗಾಗಿ ಸರ್ಕಾರ 14,690 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಹೇಳಿದ್ದಾರೆ. ಹೀಗಾಗಿ ಹೆದ್ದಾರಿಗಳ ಅಭಿವೃದ್ಧಿಯಿಂದಾಗಿ ಈ ಭಾಗಗಳಲ್ಲಿ ಆಸ್ತಿ ಬೆಲೆ ಹೆಚ್ಚಳವಾಗುವ ಸಾಧ್ಯತೆಯೂ ಇದೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications