Breaking News: ಕರ್ನಾಟಕದಲ್ಲಿ ಒಂದೇ ದಿನ 149 ಓಮಿಕ್ರಾನ್ ಪ್ರಕರಣ

ಬೆಂಗಳೂರು, ಜನವರಿ 4: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಒಂದೇ ದಿನ 100ಕ್ಕೂ ಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ 3,000ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದೇ ಹೊತ್ತಿಗೆ ರಾಜ್ಯದಲ್ಲಿ 149 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ಮಾದರಿಯ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ವೇಳೆ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

149 new Omicron cases reported in Karnataka today, tally rised to 226

ಕರ್ನಾಟಕದಲ್ಲಿ ಕೊರೊನಾವೈರಸ್ ಅಟ್ಟಹಾಸ:

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಒಂದೇ ದಿನ 2479 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ 2053 ಮಂದಿ ಬೆಂಗಳೂರಿನಲ್ಲೇ ಪತ್ತೆಯಾಗಿದ್ದರು. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2.9ರಷ್ಟಿದೆ, ಇಂದು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ, ಇದುವರೆಗೂ ಒಟ್ಟು 77 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ನಾಲ್ಕು ಮಂದಿ ಮೃತಪಟ್ಟಿದ್ದಾರೆ. 95,391 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

ಕರ್ನಾಟಕದಲ್ಲಿ ಕೊವಿಡ್-19 ಮೂರನೇ ಅಲೆ:

ರಾಜ್ಯದಲ್ಲಿ ಒಂದೇ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಶೇ. 0.99ರಷ್ಟು ಹೆಚ್ಚಾಗಿದೆ. ಹಾಗಾಗಿ ಇದು ಮೂರನೇ ಅಲೆ ಎಂದೇ ಹೇಳಬಹುದು ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಸೋಮವಾರ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಶೇ.1.60ರಷ್ಟಿತ್ತು ಅದು ಈಗ 2.90ನಷ್ಟು ಏರಿಕೆಯಾಗಿದೆ.ಕಳೆದ 1 ವಾರದಿಂದ ಬೆಂಗಳೂರಲ್ಲಿ ಡೆಡ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಇದು 3ನೇ ಅಲೆ ಬರೋದು ಪಕ್ಕಾ ಎನ್ನುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+