ಕರ್ನಾಟಕದಲ್ಲಿ ಒಟ್ಟು 26815 ಮಂದಿಗೆ ಕೊರೊನಾವೈರಸ್ ಅಂಟು!
ಬೆಂಗಳೂರು, ಜುಲೈ.07: ಕರ್ನಾಟಕದಲ್ಲಿ ಕೊರೊನಾವೈರಸ್ ಅಟ್ಟಹಾಸ ಯಥಾರೀತಿಯಲ್ಲಿ ಮುಂದುವರಿದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿಯ ಹರಡುವಿಕೆ ವೇಗ ಮಿತಿ ಮೀರಿ ಬೆಳೆಯುತ್ತಿದೆ.
Recommended Video
ರಾಜ್ಯದಲ್ಲಿನ ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ ಬರೋಬ್ಬರಿ 1498 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 26815ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಬಲಿಯಾಗುತ್ತಿರುವವರ ಸಂಖ್ಯೆಯೂ ಅದೇ ರೀತಿ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ ಮಹಾಮಾರಿಗೆ ರಾಜ್ಯದಲ್ಲಿ 15 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 416ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲೇ 800 ಮಂದಿಗೆ ಕೊವಿಡ್-19 ಸೋಂಕು:
ರಾಜ್ಯ ರಾಜಧಾನಿಯ ಜನರಿಗೆ ಕೊರೊನಾವೈರಸ್ ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಬೆಂಗಳೂರು ನಗರವೊಂದರಲ್ಲೇ 800 ಮಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಉಳಿದಂತೆ ದಕ್ಷಿಣ ಕನ್ನಡ 83, ಧಾರವಾಡ 57, ಕಲಬುರಗಿ 51, ಬೀದರ್ 51, ಮೈಸೂರು 49, ಬಳ್ಳಾರಿ 45, ರಾಮನಗರ 37, ಉತ್ತರ ಕನ್ನಡ 35, ಶಿವಮೊಗ್ಗ 33, ಮಂಡ್ಯ 29, ಉಡುಪಿ 28, ಹಾಸನ 26, ಬಾಗಲಕೋಟೆ 26, ರಾಯಚೂರು 23, ವಿಜಯಪುರ 20, ತುಮಕೂರು 16, ಕೊಡಗು 14, ಯಾದಗಿರಿ 10 ಮಂದಿಗೆ ಹಾಗೂ ದಾವಣಗೆರ, ಹಾವೇರಿ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರಿನಲ್ಲಿ ತಲಾ 6 ಮಂದಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ.












Click it and Unblock the Notifications