ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಕ್ಷೇತ್ರದ ಉಪ ಚುನಾವಣೆ; ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಇಲ್ಲ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22 : ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆಯೇ?. ಸದ್ಯ ಮಾಹಿತಿಯಂತೆ ಯಾವುದೇ ಮೈತ್ರಿ ಇಲ್ಲ.

2019ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮುಖಭಂಗ ಅನುಭವಿಸಿದ್ದವು. 28 ಕ್ಷೇತ್ರಗಳ ಪೈಕಿ ಎರಡೂ ಪಕ್ಷಗಳಿಗೆ ತಲಾ 1 ಸೀಟು ಸಿಕ್ಕಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ತಿ ಸರ್ಕಾರವೂ ಪತನಗೊಂಡಿದ್ದು, ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಅನುಮಾನ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು; 5 ಕಾರಣಗಳುಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು; 5 ಕಾರಣಗಳು

ನಾವು ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ ಎಂದು ಎರಡೂ ಪಕ್ಷಗಳ ನಾಯಕರು ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮೈತ್ರಿ ಮಾಡಿಕೊಳ್ಳುವುದು ರಾಜ್ಯ ನಾಯಕರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಮೈತ್ರಿಕೂಟದ ಸೋಲಿನ ಕಾರಣಗಳ ಪಟ್ಟಿಲೋಕಸಭಾ ಚುನಾವಣೆ: ಮೈತ್ರಿಕೂಟದ ಸೋಲಿನ ಕಾರಣಗಳ ಪಟ್ಟಿ

15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ. ಸೋಮವಾರದ ಬಳಿಕ ಮೈತ್ರಿಯ ಬಗ್ಗೆ ಸ್ಪಷ್ಟ ನಿಲುವು ಸಿಗುವ ನಿರೀಕ್ಷೆ ಇದೆ.

ಯಶವಂತಪುರ ಉಪ ಚುನಾವಣೆ; ಜವರಾಯಿ ಗೌಡ ಕಾಂಗ್ರೆಸ್‌ಗೆ?ಯಶವಂತಪುರ ಉಪ ಚುನಾವಣೆ; ಜವರಾಯಿ ಗೌಡ ಕಾಂಗ್ರೆಸ್‌ಗೆ?

ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ

ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಬಗ್ಗೆ ಮಾತನಾಡಿದ್ದು, "ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಎಲ್ಲಾ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಮಗೆ ಎದುರಾಳಿಗಳು" ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಸಿದ್ದರಾಮಯ್ಯ ಹೇಳುವುದೇನು?

ಸಿದ್ದರಾಮಯ್ಯ ಹೇಳುವುದೇನು?

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, "ಮೈತ್ರಿಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುವುದಾಗಿ" ಹೇಳಿದ್ದಾರೆ.

ನಾವೇ ಮೈತ್ರಿಗೆ ಇತಿಶ್ರೀ ಹಾಡಿದ್ದೇವೆ

ನಾವೇ ಮೈತ್ರಿಗೆ ಇತಿಶ್ರೀ ಹಾಡಿದ್ದೇವೆ

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಈ ಬಗ್ಗೆ ಮಾತನಾಡಿದ್ದು, "ಮೂರು ತಿಂಗಳಿನಿಂದ ನಾನು ಸಭೆ ಮಾಡುತ್ತಿದ್ದೇನೆ. ಕಾಂಗ್ರೆಸ್ ಜೊತೆ ಮೈತ್ರಿ ಬೇಡ ಎಂಬುದೇ ಎಲ್ಲರ ಅಭಿಪ್ರಾಯವಾಗಿದೆ. ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡುವ ತಲೆನೋವು ಅವರಿಗೆ ಬೇಡ. ನಾವೇ ಮೈತ್ರಿಗೆ ಇತಿಶ್ರೀ ಹಾಡಿದ್ದೇವೆ" ಎಂದು ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಹೇಳುವುದೇನು?

ಎಚ್. ಡಿ. ಕುಮಾರಸ್ವಾಮಿ ಹೇಳುವುದೇನು?

ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ಎಲ್ಲಾ 15 ಕ್ಷೇತ್ರಗಳಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ" ಎಂದು ಹೇಳಿದ್ದಾರೆ.

English summary
Election commission announced schedule for 15 assembly seat by election. Will Congress and JD(S) alliance continue in by poll. Both party leaders yet to take final call on this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X