15 ಡಿನೋಟಿಫಿಕೇಷನ್ ಪ್ರಕರಣ, ಬಿಎಸ್‌ವೈಗೆ ಸುಪ್ರೀಂ ನೋಟಿಸ್

Posted By:
Subscribe to Oneindia Kannada

ಬೆಂಗಳೂರು, ಜುಲೈ 12 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 15 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿದ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಮಂಗಳವಾರ ನ್ಯಾಯಮೂರ್ತಿ ಎ.ಕೆ.ಸಿಖ್ರಿ ಮತ್ತು ಎನ್‌.ವಿ.ರಮಣ ಅವರ ವಿಭಾಗೀಯ ಪೀಠ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರದ ಪರವಾಗಿ ವಕೀಲ ವಿಕಾಸ್ ಸಿಂಗ್ ಅವರು ಪ್ರಕರಣದ ಬಗ್ಗೆ ವಾದ ಮಂಡನೆ ಮಾಡಿದರು. [15 ಪ್ರಕರಣಗಳು ಯಾವುವು?]

Yeddyurappa

ಕರ್ನಾಟಕ ಹೈಕೋರ್ಟ್ 2016ರ ಜನವರಿ 5ರಂದು 2015ರ ಜೂನ್ 19 ರಿಂದ 27ರ ತನಕ ಲೋಕಾಯುಕ್ತ ಪೊಲೀಸರು ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ಧ ದಾಖಲಿಸಿದ್ದ 15 ಎಫ್ಐಆರ್‌ಗಳನ್ನು ರದ್ದುಪಡಿಸಿತ್ತು. [FIR ರದ್ದಾದರೂ ಯಡಿಯೂರಪ್ಪ ಕಾನೂನು ಹೋರಾಟ ಮುಗಿದಿಲ್ಲ]

ಮಹಾಲೆಕ್ಕಪಾಲ ವರದಿ (ಸಿಎಜಿ) ಅನ್ವಯ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ ಅವರು ಸಲ್ಲಿಸಿದ್ದ ದೂರಿನ ಅನ್ವಯ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ್ದ ಕೋರ್ಟ್, ಸಿಎಜಿ ವರದಿ ಹೊರತುಪಡಿಸಿ ಇತರೆ ಅಂಶಗಳ ಆಧಾರದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಅವಕಾಶಗಳನ್ನು ಮಕ್ತವಾಗಿಟ್ಟಿತ್ತು.

ಕರ್ನಾಟಕ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌, ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಇದರಿಂದಾಗಿ ಯಡಿಯೂರಪ್ಪ ಅವರು ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court on Tuesday issued notice to Karnataka BJP president B.S.Yeddyurappa. Karnataka government filed an appeal in the Supreme Court against Karnataka high court order that quashed 15 FIR registered against B.S.Yeddyurappa in denotification cases.
Please Wait while comments are loading...