Muslim Reservation: ಮತ್ತೆ ಮುಸ್ಲಿಮರಿಗೆ ಬಂಪರ್ ಗಿಫ್ಟ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು, ಜೂನ್‌ 20: ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಇದೀಗ ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ ಶೇ 10 ರಷ್ಟು ಮೀಸಲಾತಿ ಇರುವುದನ್ನು 15% ಗೆ ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಸಚಿವ ಹೆಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದ್ದು, ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು ಗಮನಿಸಿ ಸೂಚನೆ ನೀಡಿದೆ. ನಮ್ಮ ಸರ್ಕಾರವು ಈ ಸಮುದಾಯದವರ ವಸತಿರಹಿತರನ್ನು ಹಾಗೂ ಸಾಮಾಜಿಕ ನ್ಯಾಯವನ್ನು ಗಮನದಲ್ಲಿರಿಸಿಕೊಂಡು ಮೀಸಲಾತಿ ಹೆಚ್ಚಿಸಲಾಗಿದೆ.

15 increase in reservation for minority communities in housing projects

ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದವರು ಚರ್ಚಿಸಿದರು. ರೈತರಿಗೆ ಪರಿಹಾರ ನೀಡಲು ಕೋರಲಾಗಿ, ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ಭೇಟಿ ನೀಡಲು ಹಾಗೂ ಸಾಧ್ಯವಾದಷ್ಟು ಹೆಚಿನ ಪರಿಹಾರವನ್ನು ನೀಡಲು ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ. ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ನಿರಾಕರಿಸಿರುವ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಪ್ರಸ್ತಾಪ ಮಾಡಿದರು ಎಂದು ತಿಳಿಸಿದರು.

ಕರ್ನಾಟಕ ಕ್ರೌಡ್ ಕಂಟ್ರೋಲ್ ಮ್ಯಾನೇಜಿಂಗ್ ಕ್ರೌಡ್‌ಅಟ್ ಇವೆಂಟ್ಸ್ ಅಂಡ್ ವೆನ್ಯೂ, ಮಾಸ್ ಗ್ಯಾದರಿಂಗ್ ಬಿಲ್ 2025, ಕರ್ನಾಟಕ ರೋಹಿತ್ ವೆಮುಲಾ ಬಿಲ್ 2025, ಕರ್ನಾಟಕ ಮಿಸ್ ಇನ್ಫರರ್ಮೇಷನ್, ಫೇಕ್ ನ್ಯೂಸ್ ಪ್ರಾಹಿಬಿಷನ್ ಬಿಲ್ 2025, ಕರ್ನಾಟಕ ಹೇಟ್ ಸ್ಪೀಚ್ ಅಂಡ್ ಹೇಟ್ ಕ್ರೈಂ ಪ್ರೆವೆನ್ಶನ್ ಬಿಲ 2025 ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು, ಕೆಲವು ಬಿಲ್ಲುಗಳಲ್ಲಿ ವಿವರವಾದ ಚರ್ಚೆಯಾಗಬೇಕೆಂದು ತೀರ್ಮಾನಿಸಿ ಮುಂದಿನ ಸಚಿವ ಸಂಪುಟಕ್ಕೆ ತರಲು ತೀರ್ಮಾನಿಸಲಾಗಿದೆ ಎಂದರು.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+