ಕೊಪ್ಪಳ: ಸ್ಟೇರಿಂಗ್ ಕಟ್ ಆಗಿ ಬುಡಮೇಲಾಗಿ ಬಿದ್ದ ಬಸ್, 15 ಮಂದಿಗೆ ಗಾಯ
ಕೊಪ್ಪಳ, ಮೇ 09 : ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಮಂಗಳವಾರ ಸರ್ಕಾರಿ ಬಸ್ ವೊಂದರ ಸ್ಟೇರಿಂಗ್ ಕಟ್ ಆದ ಪರಿಣಾಮ ಪಲ್ಟಿ ಹೊಡೆದಿದೆ.
ಈ ಘಟನೆ 15 ಪ್ರಯಾಣಿಕರು ಗಾಯಗೊಂಡಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಬಸ್ ದೋಟಿಹಾಳ ಗ್ರಾಮದ ಬಳಿ ಬಸ್ ಬರುತ್ತಿದ್ದಂತೆ ಸ್ಟೇರಿಂಗ್ ಕಟ್ ಆಗಿ ಬುಡಮೇಲಾಗಿ ಬಿದ್ದಿದೆ.

ಘಟನೆಯಿಂದ ಕೆಲ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications