ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ; ಸಿದ್ದರಾಮಯ್ಯಗೆ ಬಿಜೆಪಿ ಚಾಲೆಂಜ್!

|
Google Oneindia Kannada News

ಬೆಂಗಳೂರು, ನವೆಂಬರ್ 22 : "15 ಕ್ಷೇತ್ರದ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಗೊತ್ತಾಗಲಿದೆ. ಸ್ವೀಕಾರ ಮಾಡಲು ಕಲಿಯರಿ, ಕರ್ನಾಟಕದ ಜನರು ಅದನ್ನಾದರೂ ಹೊಗಳುತ್ತಾರೆ" ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಪಾಠ ಹೇಳಿದೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಪಿ. ಮುರಳೀಧರರಾವ್ ಶುಕ್ರವಾರ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಕಾರಣ" ಎಂದು ಆರೋಪಿಸಿದ್ದಾರೆ.

ಉಪ ಚುನಾವಣೆ; ಅಪ್ಪ ಜೆಡಿಎಸ್‌ ಅಭ್ಯರ್ಥಿ, ಮಗ ಪಕ್ಷೇತರ! ಉಪ ಚುನಾವಣೆ; ಅಪ್ಪ ಜೆಡಿಎಸ್‌ ಅಭ್ಯರ್ಥಿ, ಮಗ ಪಕ್ಷೇತರ!

ಡಿಸೆಂಬರ್ 5ರಂದು 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಶಾಸಕರು ಮೈತ್ರಿ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದು ಅವರ ವಿರುದ್ಧ ಗೆದ್ದು ಬೀಗಬೇಕು ಎಂಬುದು ಕಾಂಗ್ರೆಸ್ ಪಣವಾಗಿದೆ.

ಉಪ ಸಮರ: ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಉಪ ಸಮರ: ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ

ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಟ್ವಿಟರ್ ಮೂಲಕವೂ ನಾಯಕರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಏಟು-ತಿರುಗೇಟುಗಳನ್ನು ನೀಡುತ್ತಿದ್ದಾರೆ. ಬಿಜೆಪಿ ನಾಯಕರು ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದ್ದಾರೆ.

ಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರದಲ್ಲಿ 56 ಅಭ್ಯರ್ಥಿಗಳುಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರದಲ್ಲಿ 56 ಅಭ್ಯರ್ಥಿಗಳು

ಸುಳ್ಳು ಹೇಳುವುದನ್ನು ಬಿಡಿ

ಸುಳ್ಳು ಹೇಳುವುದನ್ನು ಬಿಡಿ

"ಶ್ರೀ ಸಿದ್ದರಾಮಯ್ಯ ಅವರೇ ಅಧಿಕಾರ ಕಳೆದುಕೊಂಡ ಮೇಲೂ ನೀವು ಸುಳ್ಳು ಹೇಳುವುದನ್ನು ನಿಲ್ಲಿಸಿಲ್ಲ. ಕಾಂಗ್ರೆಸ್ ಪಕ್ಷದ ಕರ್ನಾಟಕದ ಸ್ಥಿತಿಗೆ ಜವಾಬ್ದಾರಿ ಬಿಜೆಪಿಯಲ್ಲ. ಅದು ನೀವು ಮತ್ತು ನಿಮ್ಮ ಹೈಕಮಾಂಡ್" ಎಂದು ಪಿ. ಮುರಳೀಧರರಾವ್ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವ

ಯಡಿಯೂರಪ್ಪ ನೇತೃತ್ವ

"ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸ್ಥಿರ ಸರ್ಕಾರವನ್ನು ನೀಡಲಿದೆ. ಅಭಿವೃದ್ಧಿ ಮತ್ತು ಕಲ್ಯಾಣವನ್ನು ಒಟ್ಟಿಗೆ ನೀಡಲಿದೆ" ಎಂದು ಪಿ. ಮುರಳೀಧರರಾವ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿದ್ದರಾಮಯ್ಯಗೆ ಚಾಲೆಂಜ್

ಸಿದ್ದರಾಮಯ್ಯಗೆ ಚಾಲೆಂಜ್

"15 ಕ್ಷೇತ್ರದ ಉಪ ಚುನಾವಣೆಯಲ್ಲಿ 12 ಕಾಂಗ್ರೆಸ್‌ನಿಂದಲೇ ಆಗುತ್ತಿದೆ. ಚುನಾವಣಾ ಫಲಿತಾಂಶ ಕಾಂಗ್ರೆಸ್ ಎಲ್ಲಿದೆ ಎಂಬುದನ್ನು ತೋರಿಸಲಿದೆ" ಎಂದು ಪಿ. ಮುರಳೀಧರರಾವ್ ಹೇಳಿದ್ದಾರೆ.

ಮೈತ್ರಿ ಸರ್ಕಾರ ಪತನ

ಮೈತ್ರಿ ಸರ್ಕಾರ ಪತನ

"ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿಜೆಪಿಯಿಂದ ಪತನವಾಗಿಲ್ಲ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್‌ರಿಂದ ಪತನಗೊಂಡಿತು. ಇದಕ್ಕಾಗಿ ಬಿಜೆಪಿಯತ್ತ ಬೊಟ್ಟು ಮಾಡಬೇಡಿ" ಎಂದು ಪಿ. ಮುರಳೀಧರರಾವ್ ಟ್ವೀಟ್ ಮಾಡಿದ್ದಾರೆ.

English summary
Karnataka BJP In charge P.Muralidhar Rao Challenge for opposition leader of Siddaramaiah ahead of the 15 seat by elections. Election will be held on December 5, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X