150 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರದಲ್ಲಿಯೇ ಬಿಡುಗಡೆ: ಎಚ್ ಡಿಕೆ

ಬೀದರ್, ನವೆಂಬರ್ 25: ಮುಂಬರುವ ವಿಧಾನಸಭಾ ಚುನಾವಣೆಗೆ‌ ಜೆಡಿಎಸ್ ನಿಂದ ಸ್ಪರ್ಧಿಸುವ 150 ಅಭ್ಯರ್ಥಿಗಳ ಪಟ್ಟಿ‌ ಸಿದ್ದಗೊಂಡಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, "ಕೇಂದ್ರ ಮತ್ತು ರಾಜ್ಯ ಸರಕಾರ ಬಡ ರೈತರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿವೆ.

ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸರಕಾರದಿಂದ ಉತ್ತಮ ಬೆಲೆ ಸಿಗುತ್ತಿಲ್ಲ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸರಕಾರಕ್ಕೆ ಅನುಕೂಲವಾಗಿದೆ ವಿನಹ ರೈತರಿಗಲ್ಲಾ. ಶ್ರೀಮಂತ ಉದ್ಯಮಿಗಳ ಪರ ಕೇಂದ್ರ ಕೆಲಸ ಮಾಡುತ್ತಿದೆ" ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

150 JDS candidates list will be released soon for upcoming assembly election says HDK

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸರಕಾರ ಅವಕಾಶವನ್ನೆ ಕೊಡಲಿಲ್ಲ. ಸ್ವತಃ ಕಾಂಗ್ರೆಸ್ ಸರಕಾರದ ಶಾಸಕರೇ ತಮ್ಮ ಸರಕಾರದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ.

ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನ ರಕ್ಷಿಸುತ್ತಿಲ್ಲ. ಬದಲಾಗಿ ಅವರನ್ನ ತುಳಿಯುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ 14 ಚೆಕ್ ಪೋಸ್ಟ್ ಗಳಲ್ಲಿ ಹಗಲ ದರೋಡೆ ನಡೆಯುತ್ತಿದೆ. ಆ ಹಣ ಸರಕಾರದ ಬೊಕ್ಕಸಕ್ಕೆ ಸೇರುತ್ತಿದೆ ಅಂತ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+