Get Updates
Get notified of breaking news, exclusive insights, and must-see stories!

ಕರ್ನಾಟಕ; 1505 ಹೊಸ ಕೋವಿಡ್ ಪ್ರಕರಣಗಳು ದಾಖಲು

ಬೆಂಗಳೂರು, ನವೆಂಬರ್ 26 : ಕರ್ನಾಟಕದಲ್ಲಿ 1505 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 8,79,560ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಗುರುವಾರ ರಾಜ್ಯದಲ್ಲಿ 12 ಜನರು ಸಾವನ್ನಪ್ಪಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 11,726.

ರಾಜ್ಯದಲ್ಲಿ ಗುರುವಾರ ಸೋಂಕಿನಿಂದ ಗುಣಮುಖಗೊಂಡು ಡಿಸ್ಚಾರ್ಜ್ ಆದವರು 1067 ಜನರು. ಇದುವರೆಗೂ ಗುಣಮುಖಗೊಂಡವರ ಸಂಖ್ಯೆ 8,42,499. 409 ಜನರು ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

1505 New COVID 19 Cases Reported On November 26

ಗುರುವಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 25,316 ಆಗಿದೆ. ಇವುಗಳಲ್ಲಿ 18,830 ಸಕ್ರಿಯ ಪ್ರಕರಣಗಳು ಬೆಂಗಳೂರು ನಗರದಲ್ಲಿಯೇ ಇವೆ.

17,990 ಆಂಟಿಜೆನ್, 102408 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗಿದ್ದು ಒಟ್ಟು 120398 ಮಾದರಿಗಳ ಪರೀಕ್ಷೆಯನ್ನು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಇದುವರೆಗೂ 10690557 ಮಾದರಿಗಳ ಪರೀಕ್ಷೆ ಮಾಡಲಾಗಿದೆ.

ಯಾವ ಜಿಲ್ಲೆ ಎಷ್ಟು? : ಬೆಂಗಳೂರು ನಗರದಲ್ಲಿ ಗುರುವಾರ 844 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 3,67,077. ನಗರದಲ್ಲಿ ಇಂದು 7 ಜನರು ಮೃತಪಟ್ಟಿದ್ದಾರೆ.

ಗುರುವಾರ ಬೆಂಗಳೂರು ಗ್ರಾಮಾಂತರ 34, ಬೆಳಗಾವಿ 31, ದಕ್ಷಿಣ ಕನ್ನಡ 57, ಚಿಕ್ಕಮಗಳೂರು 33, ದಾವಣಗೆರೆ 22, ಮೈಸೂರು 101, ತುಮಕೂರು 38, ಉಡುಪಿ 18, ವಿಜಯಪುರ 10, ಉತ್ತರ ಕನ್ನಡ 18 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+