ಸಿಹಿಸುದ್ದಿ: ಕರ್ನಾಟಕದಲ್ಲಿ ಕೊರೊನಾವೈರಸ್ ಸಂಖ್ಯೆ 2,000ಕ್ಕಿಂತ ಕಡಿಮೆ!

ಬೆಂಗಳೂರು, ಜುಲೈ 04: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಹೊಸ ಪ್ರಕರಣಗಳು 2,000ಕ್ಕಿಂತ ಕಡಿಮೆಯಾಗಿದ್ದು, ಸಾವಿನ ಸಂಖ್ಯೆ 60ಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.02ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 3.77ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 59 ಮಂದಿ ಕೊವಿಡ್-19 ಸೋಂಕಿನಿಂದಲೇ ಉಸಿರು ಚೆಲ್ಲಿದ್ದು, ಈವರೆಗೂ 35367 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1564 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4775 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ. ಈವರೆಗೂ 27,73,407 ಸೋಂಕಿತರು ಗುಣಮುಖರಾಗಿದ್ದು. 44,846 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 500ಕ್ಕಿಂತ ಕಡಿಮೆಯಾಗಿದೆ. ಕಳೆದ ಒಂದು ದಿನದಲ್ಲಿ 352 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,15,661ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,668ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,831 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,19,252 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,53,083 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 63,70,275 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,85,18,369 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,48,88,644 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 1564 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 17, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 42, ಬೆಂಗಳೂರು 352, ಬೀದರ್ 3, ಚಾಮರಾಜನಗರ 48, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 72, ಚಿತ್ರದುರ್ಗ 6, ದಕ್ಷಿಣ ಕನ್ನಡ 154, ದಾವಣಗೆರೆ 37, ಧಾರವಾಡ 8, ಗದಗ 5, ಹಾಸನ 59, ಹಾವೇರಿ 4, ಕಲಬುರಗಿ 10, ಕೊಡಗು 10, ಕೋಲಾರ 57, ಕೊಪ್ಪಳ 7, ಮಂಡ್ಯ 65, ಮೈಸೂರು 162, ರಾಯಚೂರು 4, ರಾಮನಗರ 14, ಶಿವಮೊಗ್ಗ 77, ತುಮಕೂರು 116, ಉಡುಪಿ 28, ಉತ್ತರ ಕನ್ನಡ 24, ವಿಜಯಪುರ 3, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ವೈರಲ್ ಆಯ್ತು ದ್ರಾವಿಡ್ ಕೊಡುತ್ತಿರುವ ಕೋಚಿಂಗ್ ಕ್ಲಾಸ್ | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಈವರೆಗೂ 7,52,393 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,07,500 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,45,921 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,57,388 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,10,26,713 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 31,64,273 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 1,96,84,543 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 40,79,943 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+